ಬೆಂಗಳೂರು : ಲೋಕಸಭೆ ಚುನಾವಣೆಗೆ ಜೆಡಿಎಸ್ ಮೂರು ಲೋಕಸಭಾ ಕ್ಷೇತ್ರಗಳಿಗೆ ತನ್ನ ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದೆ. ಮಂಡ್ಯದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ.
ಮಂಡ್ಯದಿಂದ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಹಾಸನದಿಂದ ಹಾಲಿ ಸಂಸದ ಪ್ರಜ್ವಲ್ ರೇವಣ್ಣ ಸ್ಪರ್ಧಿಸಲಿದ್ದು, ಕೋಲಾರದಿಂದ ಎಂ. ಮಲ್ಲೇಶ್ ಬಾಬು ಅವರಿಗೆ ಟಿಕೆಟ್ ಘೋಷಣೆಯಾಗಿದೆ.
ಹಾಸನ ಕ್ಷೇತ್ರದಿಂದ ಪ್ರಜ್ವಲ್ ರೇವಣ್ಣ ಈಗಾಗಲೇ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯದಿಂದ ಹೆಚ್.ಡಿ.ಕುಮಾರಸ್ವಾಮಿ ಅವರು ಸಲ್ಲಿಸಲಿದ್ದಾರೆ.