ಮಾಂಡ್ಯ : ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ, ಸಂಸದ ಪ್ರಜ್ವಲ್ ರೇವಣ್ಣ ವಿದೇಶದಲ್ಲಿ ತಲೆಮರೆಸಿಕೊಂಡಿರುವ ವಿಚಾರವಾಗಿ ಮಂಡ್ಯದಲ್ಲಿ ಕೃಷಿ ಸಚಿವ ಚೆಲುವರಾಯಸ್ವಾಮಿ ಪ್ರತಿಕ್ರಿಯೆ ನೀಡಿದ್ದು, ವಿಡಿಯೋ ಮಾಡಿದವರದು ತಪ್ಪಲ್ಲ ಆದರೆ ಪೆನ್ ಡ್ರೈವ್ ಹಂಚಿಕೆ ಮಾಡಿದವರದು ತಪ್ಪಿದೆ ಎಂದು ಬಿಜೆಪಿ ಜೆಡಿಎಸ್ ಒಂದಾಗಿ ಪ್ರಜ್ವಲ್ ಅನ್ನು ಸಮರ್ಥನೆ ಮಾಡಿಕೊಳ್ಳುತ್ತೇವೆ ಎಂದು ಕಿಡಿಕಾರಿದರು.
ಮಂಡ್ಯದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಅವರು, ಪ್ರಜ್ವಲ್ ಗೆ ಜೆಡಿಎಸ್ ಅವರಿಷ್ಟ ಎಚ್ಡಿ ದೇವೇಗೌಡ ಬರೆದಿರುವ ಪತ್ರದ ವಿಚಾರವಾಗಿ ಜೆಡಿಎಸ್ ನವರು ಪ್ರಜ್ವಲ್ ಅನ್ನು ಸಮರ್ಥಿಸಿಕೊಳ್ಳಲು ಮುಂದಾಗಿದ್ದಾರೆ. ಆ ಬಗ್ಗೆ ಮಾತನಾಡುವುದು ಸರಿಯಲ್ಲ ಪ್ರಜ್ವಲ್ ಕರೆಸುತ್ತಾರೆ ಬಿಡುತ್ತಾರೋ ಅವರಿಗೆ ಬಿಟ್ಟ ವಿಚಾರ. ಕುಮಾರಸ್ವಾಮಿ ಕುಟುಂಬಕ್ಕೆ ದೇವರು ಒಳ್ಳೆಯದು ಮಾಡಲಿ ಎಂದರು.
ವಿಡಿಯೋ ಮಾಡಿದವರು, ಮಹಿಳೆಯರನ್ನು ಬೀದಿಗೆ ತಂದವನ ತಪ್ಪಲ್ಲ.ಆದರೆ ಸಿಕ್ಕ ಪೆನ್ ಡ್ರೈವ್ ಹಂಚಿದವರದ್ದು ತಪ್ಪೆಂದು ಹೇಳುತ್ತಿದ್ದಾರೆ. ಹಾಗಾಗಿ ಪ್ರಜ್ವಲ್ ಅನ್ನು ಸಮರ್ಥನೆ ಮಾಡಿಕೊಳ್ಳಲು ಜೆಡಿಎಸ್ ಬಿಜೆಪಿ ಮುಂದಾಗಿದೆ. ಬೆಕ್ಕು ಕಣ್ಣು ಮುಚ್ಚಿ ಹಾಲು ಕುಡಿದರೆ ಗೊತ್ತಾಗಲ್ಲ ಅಂದುಕೊಂಡಿದ್ದಾರೆ. ಜನರು ಎಲ್ಲವನ್ನು ನೋಡುತ್ತಿದ್ದಾರೆ ಅವರೇ ತೀರ್ಮಾನ ಮಾಡುತ್ತಿದ್ದಾರೆ ಎಂದು ಮಂಡ್ಯದಲ್ಲಿ ಕೃಷಿ ಇಲಾಖೆಯ ಸಚಿವ ಎಂ ಚೆಲುವರಾಯಸ್ವಾಮಿ ಕಿಡಿಕಾರಿದರು.