ಬೆಂಗಳೂರು: ಇದೇ ಅಕ್ಟೋಬರ್ 8ರಂದು ಶನಿವಾರ ಬೆಂಗಳೂರಿನ ಬಸವನಗುಡಿ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಜನತಾ ಮಿತ್ರ ಸಮಾರೋಪ ಕಾರ್ಯಕ್ರಮದ ಸಿದ್ಧತೆಗಳ ಬಗ್ಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಸಮಾಲೋಚನೆ ನಡೆಸಿದರು.

ಪಕ್ಷದ ಕಚೇರಿ ಜೆಪಿ ಭವನದಲ್ಲಿ ಜೆಡಿಎಸ್ ನಗರ ಘಟಕದ ಪದಾಧಿಕಾರಿಗಳು ಹಾಗೂ ಇತರೆ ಎಲ್ಲಾ ಮುಖಂಡರ ಜತೆ ಸಭೆ ನಡೆಸಿದ ಅವರು, ಸಮಾವೇಶವನ್ನು ಯಶಸ್ವಿಗೊಳಿಸುವ ಬಗ್ಗೆ ಎಲ್ಲರೂ ಒಟ್ಟಾಗಿ ಕೆಲಸ ಮಾಡಬೇಕು ಎಂದು ತಾಕೀತು ಮಾಡಿದರು.

ವಾಣಿಜ್ಯ ಮತ್ತು ಗಣಕಯಂತ್ರ ಶಿಕ್ಷಣ ಶಾಲೆ ಪ್ರಾರಂಭಿಸಲು ಅರ್ಜಿ ಆಹ್ವಾನ

ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಗರವಾಸಿಗಳು ಈ ಸಮಾವೇಶದಲ್ಲಿ ಸೇರಲಿದ್ದಾರೆ. ನಗರದ 28 ವಿಧಾನ ಸಭೆ ಕ್ಷೇತ್ರಗಳಿಂದಲೂ ಜನರು ಭಾಗವಹಿಸುವ ಬಗ್ಗೆ ಮಾಹಿತಿ ಪಡೆದುಕೊಂಡರು.

ಅಂದು ಅಪರಾಹ್ನ 3 ಗಂಟೆಗೆ ಸಮಾವೇಶ ಆರಂಭವಾಗಲಿದ್ದು, 6 ಗಂಟೆ ಹೊತ್ತಿಗೆ ಮುಕ್ತಾಯವಾಗಲಿದೆ. ಸಭೆಯ ರೂಪುರೇಷೆ, ಭಾಗವಹಿಸುವ ಗಣ್ಯರು, ಆಗಮಿಸುವ ಜನತೆಗಾಗಿ ಮಾಡಬೇಕಾದ ವ್ಯವಸ್ಥೆಗಳ ಬಗ್ಗೆ ಕುಮಾರಸ್ವಾಮಿ ಅವರು ಜೆಡಿಎಸ್ ನಗರ ಘಟಕದ ಅಧ್ಯಕ್ಷ ಆರ್ ಪ್ರಕಾಶ್, ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ, ದಾಸರಹಳ್ಳಿ ಶಾಸಕ ಮಂಜುನಾಥ್ ಮುಂತಾದವರ ಜತೆ ಚರ್ಚಿಸಿ ಸಲಹೆಗಳನ್ನು ಪಡೆದರು.

ಮುಂಬರುವ ಬಿಬಿಎಂಪಿ ಚುನಾವಣೆ ಹಾಗೂ ವಿಧಾನಸಭೆಯಲ್ಲಿ ಪಕ್ಷವು ಅಧಿಕಾರಕ್ಕೆ ಏನೆಲ್ಲಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ ಎಂಬುದನ್ನು ನಗರದ ಜನತೆಯ ಮುಂದೆ ಇಡುವ ಕಾರ್ಯಕ್ರಮ ಇದಾಗಿದ್ದು, ಪಕ್ಷದ ಎಲ್ಲ ಮುಖಂಡರು, ವಾರ್ಡ್ ಮುಖಂಡರು, ಶಾಸಕರು, ಕಾರ್ಯಕರ್ತರು ಸಕ್ರಿಯವಾಗಿ ಕೆಲಸ ಮಾಡಬೇಕಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಸೂಚನೆ ನೀಡಿದರು.

ಸೀಮಿತ ಬಳಕೆದಾರರಿಗೆ ಜಿಯೋ 5G Welcome ಆಫರ್ ಘೋಷಣೆ ; ಸೇವೆ ಪಡೆಯುವುದು ಹೇಗೆ ಗೊತ್ತಾ??

ಬಳಿಕ ಈ ಬಗ್ಗೆ ಮಾಹಿತಿ ನೀಡಿದ ಅವರು, ಈಗಾಗಲೇ ನಗರದ 28 ವಿಧಾನಸಭೆ ಕ್ಷೇತ್ರಗಳಲ್ಲಿ ಜನತಾಮಿತ್ರ ವಾಹನಗಳು ಸಂಚಾರ ಮಾಡಿವೆ. ಈವರೆಗೂ ಜೆಡಿಎಸ್ ನಗರಕ್ಕೆ ನೀಡಿರುವ ಕೊಡುಗೆಗಳು, ಮುಂದೆ ಕೈಗೊಳ್ಳಬಹುದಾದ ಕಾರ್ಯಕ್ರಮಗಳ ಬಗ್ಗೆ ಜನತೆಗೆ ಮಾಹಿತಿ ಕೊಡಲಾಗಿದೆ. ಅಲ್ಲದೆ, ಮುಂದೆ ರಾಜ್ಯದಲ್ಲಿ ಜನತಾ ಸರಕಾರ ಅಧಿಕಾರಕ್ಕೆ ಬಂದರೆ ಹೇಗೆ ಕೆಲಸ ಮಾಡಬೇಕು ಹಾಗೂ ಜನತೆಯ ನಿರೀಕ್ಷೆಗಳು ಏನು? ಎಂಬ ಬಗ್ಗೆ ಅಭಿಪ್ರಾಯ ಸಂಗ್ರಹ ಮಾಡಲಾಗಿದೆ. ಅದನ್ನೆಲ್ಲ ನಾವು ಪ್ರಣಾಳಿಕೆಯ ಸೇರಿಸಿ ಜಾರಿ ಮಾಡುವ ಸಂಕಲ್ಪವನ್ನು ಜನತಾ ಮಿತ್ರ ಸಮಾವೇಶದಲ್ಲಿ ಮಾಡಲಿದ್ದೇವೆ ಎಂದು ಅವರು ತಿಳಿಸಿದರು.

ಹೆಚ್.ಡಿ.ದೇವೇಗೌಡರು ಮುಖ್ಯಮಂತ್ರಿ, ಪ್ರಧಾನಮಂತ್ರಿ ಆಗಿದ್ದಾಗ ಹಾಗೂ ನಾನು ಎರಡು ಬಾರಿ ಮುಖ್ಯಮಂತ್ರಿ ಆಗಿದ್ದಾಗ ನಗರಕ್ಕೆ ನೀಡಿರುವ ಕೊಡುಗೆಗಳ ಬಗ್ಗೆ ಸಮಾವೇಶ ಮೂಲಕ ಜನತೆಗೆ ಮತ್ತೊಮ್ಮೆ ತಿಳಿಸಲಾಗುವುದು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಸಮಾವೇಶದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಪಕ್ಷದ ಎಲ್ಲ ಶಾಸಕರು, ನಗರದ ಮುಖಂಡರು ಭಾಗಿಯಾಗಲಿದ್ದಾರೆ ಎಂದು ಅವರು ತಿಳಿಸಿದರು.

Share.
Exit mobile version