ಬೆಂಗಳೂರು : ವಿಧಾನಪರಿಷತ್ ಸದಸ್ಯ ಜೆಡಿಎಸ್ ನ ಟಿ.ಎ. ಶರವಣ ಅವರಿಗೆ ಲಘು ಹೃದಯಾಘಾತವಾಗಿದ್ದು, ಜಯದೇವಹ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಶರವಣ ಅವರಿಗೆ ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಹೃದಯದಲ್ಲಿ ಸ್ಟಂಟ್ ಅಳವಡಿಕೆ ಮಾಡಲಾಗಿದೆ. ಸದ್ಯ ಅವರು ಚೇತರಿಸಿಕೊಂಡಿದ್ದಾರೆ.
ಶರವಣ ಅವರ ಹೃದಯದಲ್ಲಿ ಸಮಸ್ಯೆ ಇರುವುದು ಕಾಣಿಸಿಕೊಂಡಿದ್ದರಿಂದ ತಕ್ಷಣ ಜಯದೇವ ಆಸ್ಪತ್ರೆಗೆ ತೆರಳಿ ಪೂರ್ಣ ತಪಾಸಣೆಗೊಳಗಾಗಿದ್ದರು. ತಪಾಸಣೆ ನಡೆಸಿದ ವೈದ್ಯರು ಬ್ಲಾಕೇಜ್ ಇರುವುದು ಮನಗಂಡು ಶಸ್ತ್ರಚಿಕಿತ್ಸೆ ನಡೆಸಿ ಸ್ಟಂಟ್ ಅಳವಡಿಸಿದ್ದಾರೆ.