ಸುಭಾಷಿತ :

Monday, February 17 , 2020 5:14 AM

ಜೆಡಿಎಸ್ ಗೆ ಬಿಗ್ ಶಾಕ್ : ಮತ್ತಷ್ಟು ಶಾಸಕರು ಪಕ್ಷಕ್ಕೆ ಗುಡ್ ಬೈ?


Saturday, September 14th, 2019 11:03 am

ಬೆಂಗಳೂರು : ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆಯಾದ ಬೆನ್ನಲ್ಲೇ ಇದೀಗ ಮತ್ತೆ ಪಕ್ಷಾಂತರ ಪರ್ವ ಆರಂಭವಾಗಿದ್ದು, ಜೆಡಿಎಸ್ ನ ಆರು ಹಾಲಿ ಶಾಸಕರು ಪಕ್ಷಕ್ಕೆ ಗುಡ್ ಬೈ ಹೇಳಲು ಮುಂದಾಗಿದ್ದಾರೆ ಎನ್ನಲಾಗಿದೆ.

ಈಗಾಗಲೇ ಅಧಿಕಾರವನ್ನು ಕಳೆದುಕೊಂಡಿರುವ ಜೆಡಿಎಸ್ ಗೆ ಇದೀಗ ಮತ್ತೊಂದು ಶಾಕ್ ಎದುರಾಗಿದ್ದು, ಇನ್ನೂ ಕೆಲ ಶಾಸಕರು ಬಿಜೆಪಿ ಸೇರ್ಪಡೆಗೆ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ಪಕ್ಷದಲ್ಲೇ ಇದ್ದು, ಕೆಲ ಶಾಸಕರು ಕಾಂಗ್ರೆಸ್ ಗೆ ಸೇರ್ಪಡೆಯಾಗಲು ಒಳಗೊಳಗೆ ಬಿಗ್ ಪ್ಲಾನ್ ಮಾಡಿದ್ದಾರೆ ಎನ್ನಲಾಗಿದೆ.

ಜೆಡಿಎಸ್ ಪಕ್ಷದ ಹಿರಿಯ ನಾಯಕರ ವರ್ತನೆಗೆ ಬೇಸತ್ತು ಶಾಸಕರು ರಾಜೀನಾಮೆ ನೀಡುವ ನಿರ್ಧಾರಕ್ಕೆ ಬಂದಿದ್ದಾರೆ ಎನ್ನಲಾಗಿದ್ದು, ರಾಜೀನಾಮೆ ನೀಡುವ ಶಾಸಕರ ಪಟ್ಟಿ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರ ಕೈ ಸೇರಿದೆ. ರಾಜೀನಾಮೆ ನೀಡುವ ಬಹುತೇಕ ಜೆಡಿಎಸ್ ಶಾಸಕರು ಕಾಂಗ್ರೆಸ್ ನತ್ತ ಒಲವು ತೋರಿಸಿದ್ದಾರೆ ಎಂದು ಹೇಲಲಾಗುತ್ತಿದೆ.

ಚಾಮುಂಡೇಶ್ವರಿ ಕ್ಷೇತ್ರದ ಜಿ.ಟಿ. ದೇವೇಗೌಡ, ಎಸ್.ಆರ್. ಶ್ರೀನಿವಾಸ್, ಪಿರಿಯಾಪಟ್ಟಣದ ಮಹದೇವ್, ಅರಸೀಕೆರೆ ಕ್ಷೇತ್ರದ ಶಿವಲಿಂಗೇಗೌಡ, ಶಿರಾ ಸತ್ಯನಾರಾಯಣ, ಶ್ರೀರಂಗಪಟ್ಟಣದ ರವೀಂದ್ರ ಶ್ರೀಕಂಠಯ್ಯ ಹಾಗೂ ನಾಗಮಂಗಲದ ಸುರೇಶ್ ಗೌಡ ಅವರು ಜೆಡಿಎಸ್ ಗೆ ಗುಡ್ ಬೈ ಹೇಳಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions