ಸುಭಾಷಿತ :

Monday, February 24 , 2020 1:59 AM

ಇನ್ನೂ 3 ವರ್ಷಗಳ ಕಾಲ ಯಡಿಯೂರಪ್ಪ ಅವರೇ ಸಿಎಂ : ಬಿಎಸ್ ವೈ ಪರ ಜಿಡಿಟಿ ಬ್ಯಾಟಿಂಗ್


Sunday, January 26th, 2020 1:27 pm

ಸುತ್ತೂರು : ಯಾರೂ ಏನೇ ಹೇಳಿದ್ರೂ… ಮುಂದಿನ ಮೂರು ವರ್ಷಗಳ ಕಾಲ ಬಿಎಸ್ ಯಡಿಯೂರಪ್ಪ ಅವರು ಈ ರಾಜ್ಯದ ಮುಖ್ಯಮಂತ್ರಿಯಾಗಿರುತ್ತಾರೆ. ಅವರಿಗೆ ಎಲ್ಲರೂ ಸಹಕಾರ ನೀಡಬೇಕು ಎಂಬುದಾಗಿ ಜೆಡಿಎಸ್ ಶಾಸಕ ಜಿಟಿ ದೇವೇಗೌಡರು, ಸಿಎಂ ಯಡಿಯೂರಪ್ಪ ಪರವಾಗಿ ಬ್ಯಾಟಿಂಗ್ ಮಾಡಿದ್ದಾರೆ.

ಸುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಾಸಕ ಜಿಟಿ ದೇವೇಗೌಡ, ರಾಜ್ಯದಲ್ಲಿ ಮೂರು ವರ್ಷಗಳ ಕಾಲ ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸಲಿದೆ. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಯಾರು ಏನೇ ಹೇಳಿದ್ರೂ, ಈ ರಾಜ್ಯದ ಮುಖ್ಯಮಂತ್ರಿಯಾಗಿ 3 ವರ್ಷಗಳ ಕಾಲ ಮುಂದುವರೆಯಲಿದ್ದಾರೆ ಎಂದು ಹೇಳಿದರು.

ಇನ್ನೂ ಮುಂದುವರೆದು.. ಬಿಜೆಪಿ ನೇತೃತ್ವದ ರಾಜ್ಯ ಸರ್ಕಾರದ ಬಗ್ಗೆ ಯಾರೂ ಏನೇ ಹೇಳಿದ್ರೂ, ಮುಂದಿನ ಮೂರು ವರ್ಷಗಳ ಕಾಲ ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಇರುತ್ತಾರೆ. ಅವರಿಗೆ ಎಲ್ಲರೂ ಸಹಕಾರ ನೀಡಬೇಕು. ಈ ಮೂಲಕ ಉತ್ತಮ ಆಡಳಿತಕ್ಕೆ ಸಹಕಾರಿಯಾಗಬೇಕು ಎಂಬುದಾಗಿ ಜೆಡಿಎಸ್ ನ ಜಿಟಿ ದೇವೇಗೌಡ ಸಿಎಂ ಪರವಾಗಿ ಬ್ಯಾಟ್ ಬೀಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Sandalwood
Food
Bollywood
Other film
Astrology
Cricket Score
Poll Questions