ಬೆಂಗಳೂರು : ಮಂಡ್ಯ ತಾಲೂಕಿನ ಕೆರಗೋಡಿನಲ್ಲಿ ಹನುಮಧ್ವಜ ತೆರುಗು ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸದಾಶಿವನಗರ ತಮ್ಮ ನಿವಾಸದಲ್ಲಿ ಮಾತನಾಡಿ ಬಹುತೇಕ ಜೆಡಿಎಸ್ ಪಕ್ಷ ಬಿಜೆಪಿಯೊಂದಿಗೆ ವಿಲೀನ ಗೊಂಡಿದೆ ಎಂದು ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅವರು ಇವರನ್ನು ನುಂಗುತಾರೋ ಇವರ ಅವರನ್ನು ನುಂಗುತ್ತಾರೋ ನೋಡೋಣ. ಮಂಡ್ಯದಲ್ಲಿ ಬಹಳ ತೊಂದರೆ ಕೊಡುತ್ತಿದ್ದಾರೆ ಎಂದು ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ಡಿಡಿಸಿ ಮಡಿಕೆ ಶಿವಕುಮಾರ್ ಆಕ್ರೋಶ ಹೊರ ಹಾಕಿದರು.
ಕೇಸರಿ ಶಾಲು ಧರಿಸಿ ಎಚ್ ಡಿ ಕುಮಾರಸ್ವಾಮಿ ಪ್ರತಿಭಟನೆ ವಿಚಾರವಾಗಿ ಮಾತನಾಡಿದ ಅವರು, ಕೇಸರಿ ಶಾಲುವಾದರೂ ಹಾಕಿಕೊಳ್ಳಲಿ ಏನಾದರೂ ಹಾಕಿಕೊಳ್ಳಲಿ. ಬಹುತೇಕ ಬಿಜೆಪಿ ಜೊತೆ ಜೆಡಿಎಸ್ ಪಕ್ಷ ವಿಲೀನ ಆಗಿದೆ. ಯಾವ ಬಣ್ಣದ ಬಾವುಟ ಬೇಕಾದರೂ ಹಾಕಿಕೊಳ್ಳಲಿ ಬಿಡಿ ಎಂದು ತಿಳಿಸಿದರು.
ಮಂಡ್ಯ ಜಿಲ್ಲೆಯಲ್ಲಿ ಭಾರತೀಯ ಜನತಾ ಪಾರ್ಟಿಯ ಅಸ್ತಿತ್ವ ಇಲ್ಲ. ಹೀಗಾಗಿ ಜೆಡಿಎಸ್ ನವರು ಬಿಜೆಪಿ ಜೊತೆ ಸೇರಿ ಹೋಗಿದ್ದಾರೆ. ಗೊಂದಲ ಮೂಡಿಸಬೇಕು ಅಂತ ಏನೇನೋ ಮಾಡುತ್ತಿದ್ದಾರೆ. ಹಳೆ ಮೈಸೂರು ಭಾಗದ ಜನ ಅಣ್ಣತಮ್ಮಂದಿರ ರೀತಿ ಬದುಕುತ್ತಿದ್ದಾರೆ. ಆದರೆ ಇವರು ಅಶಾಂತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. ಬೆಂಗಳೂರಿನಲ್ಲಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದ ವಿರುದ್ಧ ದಾಳಿ ನಡೆಸಿದರು.