ಬೆಂಗಳೂರು: ಇದೇ ಏಪ್ರಿಲ್ 11ರಂದು ಬೆಂಗಳೂರಿನ ಕೊಮ್ಮಘಟ್ಟ ನೈಸ್ ಮೈದಾನದಲ್ಲಿ ನಡೆಯಲಿರುವ ಜೆಡಿಎಸ್ ಜನತಾ ಸಮಾವೇಶದ ಸಿದ್ಧತೆಗಳ ಬಗ್ಗೆ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ಕಾರ್ಯಕರ್ತರ ಸಭೆ ಶನಿವಾರ ನಡೆಯಿತು.
ಸಮಾವೇಶವನ್ನು ಯಶಸ್ವಿಗೊಳಿಸುವ ನಿಟ್ಟಿನಲ್ಲಿ ನಡೆದ ಈ ಸಭೆಯ ಅಧ್ಯಕ್ಷತೆಯನ್ನು ಗ್ರೇಟರ್ ಬೆಂಗಳೂರು ಜನತಾದಳ ಅಧ್ಯಕ್ಷರಾದ ಹೆಚ್.ಎಂ. ರಮೇಶ್ ಗೌಡರು ವಹಿಸಿದ್ದರು.
ಮುಂಬರುವ ಗ್ರೇಟರ್ ಬೆಂಗಳೂರು ಚುನಾವಣೆ ಸೇರಿದಂತೆ ರಾಜ್ಯದಲ್ಲಿ ಮತ್ತು ರಾಜಧಾನಿಯಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟವನ್ನು ಬಲಪಡಿಸುವ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡಬೇಕು ಹಾಗೂ ಸಮಾವೇಶವನ್ನು ಯಶಸ್ವಿಗೊಳಿಸಲು ದುಡಿಮೆ ಮಾಡಬೇಕು ಎಂದು ರಮೇಶ್ ಗೌಡ ಅವರು ಕರೆ ನೀಡಿದರು.
ರಾಜ್ಯದಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಬೆಂಗಳೂರು ನಗರದ ಜನರು ತೀವ್ರ ಸಂಕಷ್ಟಕ್ಕೆ ಗುರಿಯಾಗಿದ್ದಾರೆ. ಬೆಲೆ ಏರಿಕೆ ಹಾಗೂ ತೆರಿಗೆಗಳ ಹೇರಿಕೆಯಿಂದ ಅವರು ಬಸವಳಿದಿದ್ದಾರೆ. ಈ ನಿಟ್ಟಿನಲ್ಲಿ ಸರ್ಕಾರದ ಕೆಟ್ಟ ನಿರ್ಧಾರಗಳು ಹಾಗೂ ನಡವಳಿಕೆಗಳನ್ನು ಖಂಡಿಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಅವರು ತಿಳಿಸಿದರು.
ಗ್ರೇಟರ್ ಬೆಂಗಳೂರು ಚುನಾವಣೆಯ ನಂತರ ನಗರದಲ್ಲಿ ಜೆಡಿಎಸ್ ಮತ್ತು ಬಿಜೆಪಿ ನೇತೃತ್ವದ ಮೈತ್ರಿಕೂಟಕ್ಕೆ ಜನರು ಆಶೀರ್ವಾದ ಮಾಡುವುದು ಖಚಿತ. ಹೀಗಾಗಿ ರಾಜ್ಯ ಕಾಂಗ್ರೆಸ್ ಸರ್ಕಾರದ ಅನ್ಯಾಯಗಳನ್ನು ಜನತೆಗೆ ಸ್ಪಷ್ಟವಾಗಿ ತಿಳಿಸಬೇಕು. ಅದಕ್ಕೆ ಪೂರ್ವಭಾವಿಯಾಗಿ ಪಕ್ಷದ ಎಲ್ಲಾ ಮುಖಂಡರು ಸಮಾವೇಶದ ಯಶಸ್ಸಿಗೆ ದುಡಿಯಬೇಕು ಎಂದು ಅವರು ಒತ್ತಿ ನೀಡಿದರು.
ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು, ಪಕ್ಷದ ರಾಜ್ಯಾಧ್ಯಕ್ಷರು ಹಾಗೂ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹಾಗೂ ಜೆಡಿಎಸ್ ಯುವ ಘಟಕದ ಅಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಕೂಡ ಈ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ ಎಂದು ಅವರು ಮಾಹಿತಿ ನೀಡಿದರು.
ಯುವನಾಯಕರಾದ ನಿಖಿಲ್ ಕುಮಾರಸ್ವಾಮಿ ಅವರು ರಾಜ್ಯಾದ್ಯಂತ ಹಮ್ಮಿಕೊಂಡಿರುವ ಜನತಾ ಸಮಾವೇಶ ಕಾರ್ಯಕ್ರಮಗಳು ಅತ್ಯಂತ ಯಶಸ್ವಿಯಾಗಿ ಕಾರ್ಯಕರ್ತರಲ್ಲಿ ಉತ್ಸಾಹವನ್ನು ತುಂಬಿವೆ. ಜೊತೆಗೆ ಪಕ್ಷದ ಸದಸ್ಯತ್ವ ಪಡೆಯುವವರ ಹೆಚ್ಚಾಗಿದೆ. ತಳಮಟ್ಟದಲ್ಲಿ ಹೆಚ್ಚು ಹೆಚ್ಚಾಗಿ ಯುವಕರು ಜೆಡಿಎಸ್ ಪಕ್ಷವನ್ನು ಸೇರುತ್ತಿದ್ದಾರೆ ಎಂದು ರಮೇಶ್ ಗೌಡರು ಸಭೆಗೆ ತಿಳಿಸಿದರು.
ಸಾವೇಶದಲ್ಲಿ ಬೆಂಗಳೂರಿನ ಎಲ್ಲಾ ಹಿರಿಯ ಮುಖಂಡರು, ವಿಧಾನ ಪರಿಷತ್ ಸದಸ್ಯರು, ಮಾಜಿ ಶಾಸಕರು ಸೇರಿದಂತೆ ಜೆಡಿಎಸ್ ಪಕ್ಷದ ಕೋರ್ ಕಮಿಟಿ ಅಧ್ಯಕ್ಷರಾದ ಎಂ.ಕೃಷ್ಣಾರೆಡ್ಡಿ ಅವರು ಕೂಡ ಈ ಬೃಹತ್ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ ಎಂದು ಅವಳು ತಿಳಿಸಿದರು.
ಈ ಸಭೆಯಲ್ಲಿ ಕ್ಷೇತ್ರದ ಅಧ್ಯಕ್ಷರಾದ ಎಂ. ಮುನಿಸ್ವಾಮಿ, ಮಾಜಿ ಶಾಸಕರು ಹಾಗೂ ಬೆಂಗಳೂರು ಉತ್ತರ ಜಿಲ್ಲೆಯ ಅಧ್ಯಕ್ಷ ಇ.ಕೃಷ್ಣಪ್ಪ, ಬೆಂಗಳೂರು ಪಶ್ಚಿಮ ಜಿಲ್ಲಾ ಅಧ್ಯಕ್ಷ ಟಿ.ತಿಮ್ಮೇಗೌಡ, ಹಿರಿಯ ಮುಖಂಡರಾದ ಬಿ.ಅಂದಾನಪ್ಪ, ರಾಜ್ಯ ಐಟಿ ವಿಭಾಗದ ಅಧ್ಯಕ್ಷ ಚಂದನ್, ಕ್ಷೇತ್ರದ ಮಹಿಳಾ ಅಧ್ಯಕ್ಷೆ ಲಕ್ಷ್ಮೀದೇವಿ ಇನ್ನಿತರ ಹಿರಿಯ ಮುಖಂಡರು ಸೇರಿದಂತೆ ಸುಮಾರು 4000 ಕಾರ್ಯಕರ್ತರು ಸಭೆಯಲ್ಲಿ ಭಾಗವಹಿಸಿದ್ದರು.
BIG Alert: ‘ಆನ್‌ಲೈನ್’ನಲ್ಲಿ ‘IPL ಟಿಕೆಟ್’ ಖರೀದಿಗಾಗಿ ಹುಡುಕುತ್ತಿದ್ದೀರಾ? ಅದಕ್ಕೂ ಮುನ್ನ ಈ ಸುದ್ದಿ ಓದಿ.!








