ಬೆಂಗಳೂರು: ನಾಳೆ ಚನ್ನಪಟ್ಟಣ ಉಪ ಚುನಾವಣೆಗೆ ಅಭ್ಯರ್ಥಿಯನ್ನು ಫೈನಲ್ ಮಾಡಿ, ಘೋಷಣೆ ಮಾಡಲಾಗುತ್ತದೆ ಎಂಬುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಹೇಳಿದ್ದಾರೆ.
ಇಂದು ಚನ್ನಪಟ್ಟಣ ವಿಧಾನಸಭಾ ಉಪ ಚುನಾವಣೆಗೆ ಅಭ್ಯರ್ಥಿ ಫೈನಲ್ ಮಾಡುವ ಸಂಬಂಧ ಜೆಡಿಎಸ್ ಹಾಗೂ ಬಿಜೆಪಿ ನಾಯಕರ ಸಭೆ ನಡೆಸಲಾಯಿತು. ಈ ಸಭೆಯಲ್ಲಿ ಕೇಂದ್ರ ಸಚಿವರಾದ HD ಕುಮಾರಸ್ವಾಮಿ, ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಮಾಜಿ ಸಚಿವರಾದ ಸಾ.ರಾ.ಮಹೇಶ್, ಸಿ ಎಸ್ ಪುಟ್ಟರಾಜು, ವೆಂಕಟರಾವ್ ನಾಡಗೌಡ, ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಸಂಸದ ಮಲ್ಲೇಶ್ ಬಾಬು, ಮಾಜಿ ಶಾಸಕರಾದ ಸುರೇಶ್ ಗೌಡ, ಡಾ.ಅನ್ನದಾನಿ, ಕೊಪ್ಪಳ ಚಂದ್ರಶೇಖರ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷರಾದ ವಿಜಯೇಂದ್ರ, ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾದ ಅಶೋಕ್ ಭಾಗಿಯಾಗಿದ್ದರು.
ಈ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸುರೇಶ್ ಬಾಬು ಅವರು, ಜೆಡಿಎಸ್ ಹಾಗೂ ಬಿಜೆಪಿ ಎರಡು ಪಕ್ಷಗಳು ಒಪ್ಪಿದಂತ ಒಮ್ಮತದ ಅಭ್ಯರ್ಥಿಯನ್ನು ನಾಳೆ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಅಭ್ಯರ್ಥಿಯಾಗಿ ಫೈನಲ್ ಮಾಡುವುದಾಗಿ ತಿಳಿಸಿದರು.
ಹೆಚ್.ಡಿ ಕುಮಾರಸ್ವಾಮಿ ಯಾರನ್ನಾದರೂ ನಿಲ್ಲಿಸಲು ಸ್ವಾತಂತ್ರ್ಯ ನೀಡಲಾಗಿದೆ. ಚನ್ನಪಟ್ಟಣ ಕ್ಷೇತ್ರವನ್ನು ಜೆಡಿಎಸ್ ಅಭ್ಯರ್ಥಿ ಹಾಕುವ ಸಂಬಂಧ ಬಿಜೆಪಿ ಹೇಳಿದೆ. ಎಲ್ಲಾ ಕ್ಷೇತ್ರಗಳಲ್ಲಿ ಅಭ್ಯರ್ಥಿಗಳು ಗೆಲ್ಲಬೇಕು. ಹೀಗಾಗಿ ಗೆಲ್ಲುವ ಅಭ್ಯರ್ಥಿಯನ್ನು ಅಳೆದು ತೂಗಿ ನಿರ್ಧಾರ ಮಾಡಲಾಗುತ್ತಿದೆ. ಎನ್ ಡಿಎ ಅಭ್ಯರ್ಥಿ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿರುತ್ತಾರೆ ಎಂದರು.
ಮಾಜಿ ಸಚಿವ ಸಿ.ಪಿ ಯೋಗೇಶ್ವರ್ ಟಿಕೆಟ್ ಕೇಳುವುದರಲ್ಲಿ ತಪ್ಪಿಲ್ಲ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಅದು ಆಗದ ರೀತಿಯಲ್ಲಿ ಕೆಲಸ ಮಾಡುತ್ತೇವೆ. ಮೂರು ಕ್ಷೇತ್ರಗಳಲ್ಲಿ ಒಮ್ಮತದ ಅಭ್ಯರ್ಥಿ ಹಾಕಿ ಗೆಲ್ಲಿಸುವ ನಿರ್ಧಾರವನ್ನು ಇಂದಿನ ಸಭೆಯಲ್ಲಿ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.
BIG NEWS: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿಗೆ ‘ಸರ್ಕಾರಿ ವಸತಿ ಗೃಹ’ ತೆರವಿಗೆ ಸೂಚನೆ
BREAKING : ‘ಮುಡಾ’ ಹಗರಣದಲ್ಲಿ ಸಿಎಂಗೆ ಮತ್ತೆ ಸಂಕಷ್ಟ : ಪತ್ನಿ ಪಾರ್ವತಿ ವಿರುದ್ಧ ಮತ್ತೊಂದು ‘ಭೂ’ ಅಕ್ರಮ ಆರೋಪ!