ಬೆಂಗಳೂರು: ಹಾಸನ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಗೆ ಬೆದರಿಕೆ ಹಾಕಿ ಅಪಹರಣ ಮಾಡಲು ಪ್ರಚೋದಿಸಿದ ಆರೋಪದ ಮೇಲೆ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಈ ನಡುವೆ ಜಾಮೀನು ಪ್ರಕ್ರಿಯೆಗಳುಯ ಎಲ್ಲವೂ ಕೂಡ ಆದ ಬಳಿಕ ಇಂದು ಹೆಚ್.ಡಿ ರೇವಣ್ಣನವರು ಪರಪ್ಪನ ಅಗ್ರಹಾರದಲ್ಲಿರುವ ಜೈಲನಲ್ಲಿನಿಂದ ಹೊರ ಬಂದರು. ಈ ನಡುವೆ ಅವರ ಅಭಿಮಾನಿಗಳು ಅವರನ್ನು ಸಂಭ್ರಮದಿಂದ ಸ್ವಾಗತಿಸಿದರು. ಇಬ್ಬರ ಶ್ಯೂರಿಟಿ, 5 ಲಕ್ಷ ರೂಪಾಯಿ ಬಾಂಡ್ ನೀಡುವಂತೆ ರೇವಣ್ಣಗೆ ಸೂಚಿಸಿರುವ ಕೋರ್ಟ್ ಸಾಕ್ಷಿ ನಾಶಕ್ಕೆ ಮುಂದಾಗಬಾರದು, ಮಂಡ್ಯ ಜಿಲ್ಲೆಯ ಕೆಆರ್ ನಗರ ತಾಲೂಕಿಗೆ ಹೋಗಬಾರದು, ಸಂತ್ರಸ್ತೆಯರಿಗೆ ಬೆದರಿಕೆ ಹಾಕಬಾರದು. ಎಸ್ಐಟಿ ತನಿಖೆಗೆ ಸಹಕರಿಸಬೇಕು ಷರತ್ತುಗಳ ಮೇಲೆ ಜಾಮೀನು ನೀಡಿದೆ.
ಈ ನಡುವೆ ಸ್ಥಳದಲ್ಲಿ ರೇವಣ್ಣನವರನ್ನು ಬರಮಾಡಿಕೊಳ್ಳುವ ಸಲುವಾಗಿ ನೂರಾರು ಮಂದಿ ಜೆಡಿಎಸ್ ಕಾರ್ಯಕರ್ತರು ಆಗಮಿಸಿದ್ದರು. ಈ ವೇಳೆ ಮುಂಜಾಗ್ರತ ಕ್ರಮವಾಗಿ ಪೋಲಿಸರು ಸ್ಥಳದಲ್ಲಿದ್ದ ಕಾರ್ಯಕರ್ತರನ್ನು ಲಾಠೀ ಬೀಸುವ ಮೂಲಕ ಚದುರಿಸಿದರು. ಇನ್ನೂ ಹೆಚ್‌ಡಿ ರೇವಣ್ಣನವರು ಪದ್ಮನಾಭನಗರದಲ್ಲಿರುವ ತಮ್ಮ ತಂದೆ ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವಗೌಡರ ಮನೆಗೆ ತೆರಳಲಿದ್ದಾರೆ ಎನ್ನಲಾಗಿದೆ.