ಬೆಂಗಳೂರು : “ಹಿಂದಿ ದಿವಸ್”. ಪ್ರತಿ ವರ್ಷ ಸೆಪ್ಟೆಂಬರ್ 14 ರಂದು ಹಿಂದಿ ದಿವಸ್ ಅನ್ನು ಆಚರಿಸಲಾಗುತ್ತದೆ. ಹಿಂದಿ ದಿವಸ್ ಆಚರಣೆಗೆ ಕೆಲವು ರಾಜ್ಯಗಳಲ್ಲಿ ಹಲವು ವರ್ಷಗಳಿಂದ ಭಾರಿ ವಿರೋಧಗಳು ವ್ಯಕ್ತವಾಗುತ್ತಿವೆ. ಅದರಲ್ಲೂ ಹಿಂದಿ ದಿವಸ್ ಆಚರಣೆಗೆ ಜೆಡಿಎಸ್ ವಿರೋಧ ವ್ಯಕ್ತಪಡಿಸಿದ ವಿಚಾರದ ಬಗ್ಗೆ ಬೆಂಗಳೂರಿನಲ್ಲಿ ಬಿಜೆಪಿ ನಾಯಕ ಸಿ.ಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು?
ದೇವೇಗೌಡ್ರು ಪ್ರಧಾನಿ ಆಗಿದ್ದಾಗ ಹಿಂದಿ ದಿವಸ್ ಮಾಡ್ಲಿಲ್ವಾ? ಮುಲಾಯಮ್ ಸಿಂಗ್ ಬಂದಾಗ ಯಾವ ಭಾಷೆಯಲ್ಲಿ ಮಾತನಾಡಿದ್ರು. ಜೆಡಿಎಸ್ ನಾಯಕರಿಗೆ ಬಿಜೆಪಿ ನಾಯಕ ಸಿ.ಟಿ ರವಿ ಪ್ರಶ್ನಿಮಾಡಿದ್ದಾರೆ. ಒನ್ ನೇಷನ್ ಒನ್ ಎಮೋಷನ್ ಎಲ್ಲವನ್ನೂ ಗೌರವಿಸುತ್ತೇನೆ. ದೆಹಲಿಯಲ್ಲಿ ಕನ್ನಡ ರಾಜ್ಯೋತ್ಸವ ಮಾಡಿಸುತ್ತೇವೆ. ಬೇರೆ ರಾಜ್ಯದ ಉತ್ಸವವನ್ನು ಕರ್ನಾಟದಲ್ಲೂ ಮಾಡಿದ್ದೇವೆ. ಕರ್ನಾಟಕದಲ್ಲಿ ಕನ್ನಡವೇ ಸಾರ್ವಭೌಮ ಎಂದು ಸಿಟಿ ರವಿ ಪ್ರತಿಕ್ರಿಯೆ ನೀಡಿದ್ದಾರೆ.
BIGG NEWS : ರಾಜ್ಯದಲ್ಲಿ ಮಕ್ಕಳ ಕಳ್ಳರ ವದಂತಿ : ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದೇನು?