ಬೆಂಗಳೂರು : ಬೆಂಗಳೂರಿನಲ್ಲಿ ಇಂದು ಹೆಚ್.ಡಿ ಕುಮಾರಸ್ವಾಮಿ ಕನಸಿನ ಕೂಸು ‘ಪಂಚರತ್ರ’ ರಥ ಯಾತ್ರೆಗೆ ಚಾಲನೆ ನೀಡಿದ್ದಾರೆ.
ಇಂದು ಬೆಳಗ್ಗೆ 9 :45 ಕ್ಕೆ ಬೆಂಗಳೂರಿನ ಗವಿಗಂಗಾಧರೇಶ್ವರ ದೇವಾಲಯದಲ್ಲಿ ಬೆಂಗಳೂರಿನಲ್ಲಿ ಪಂಚರತ್ನ ರಥ ಯಾತ್ರೆಗೆ ಹೆಚ್.ಡಿ ಕುಮಾರಸ್ವಾಮಿ ಚಾಲನೆ ನೀಡಿದ್ದಾರೆ. ನಂತರ ಮಾತನಾಡಿದ ಕುಮಾರಸ್ವಾಮಿ ನ. 1 ರಿಂದ ಪ್ರಾರಂಭಿಸಲು ಚಿಂತನೆ ನಡೆಸಿದ್ದೆವು, ಆದರೆ ಇವತ್ತೆ ಒಳ್ಳೆದಿನ ಎಂದು ಇಂದೇ ಆರಂಭ ಮಾಡಿದ್ದೇವೆ ಎಂದಿದ್ದಾರೆ.
ವಿಧಾನ ಸಭೆ ಚುನಾವಣೆ ಸಮೀಸುತ್ತಿದ್ದಂತೆ ರಾಜಕೀಯ ವಲಯದಲ್ಲಿ ತಯಾರಿ ಜೋರಾಗಿದೆ. ಕಾಂsಗ್ರೆಸ್ ಭಾರತ್ ಜೋಡೋ ಯಾತ್ರೆ ಮೂಲಕ ಜನರನ್ನು ತಲುಪುತ್ತಿದ್ದು ಬಿಜೆಪಿ ಜನ ಸಂಕಲ್ಪದಿಂದ ಮತದಾರರ ಮನ ಗೆಲ್ಲಲು ಯತ್ನಿಸುತ್ತಿದೆ. ಮತ್ತೊಂದೆಡೆ ಜೆಡಿಎಸ್ ಪಕ್ಷ ಕೂಡ ಮುಂಬರುವ ಚುನಾವಣೆಗೆ ಭರ್ಜರಿ ಸಿದ್ದತೆ ಮಾಡಿಕೊಳ್ಳುತ್ತಿದೆ. ಮೊದಲ ಹಂತದ ಪಂಚರತ್ನ ರಥಯಾತ್ರೆಯ ಪಟ್ಟಿ ಬಿಡುಗಡೆ ಮಾಡಲಾಗಿದೆ. ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ರಥಯಾತ್ರೆ ನಡೆಯಲಿದೆ. ಉದ್ಯೋಗ, ಶಿಕ್ಷಣ, ನೀರಾವರಿ, ಕೃಷಿ, ಆರೋಗ್ಯ ಸೇರಿದಂತೆ ಪಂಚಯಾತ್ರೆಯಲ್ಲಿ ಈ ಬಗ್ಗೆ ಯೋಜನೆ ರೂಪಿಸಲಾಗಿದೆ.
BREAKING NEWS: ಬಂಡೇಮಠದ ಬಸವಲಿಂಗ ಶ್ರೀ ಕೇಸ್: ಕಾರು ಚಾಲಕ, ದೇವಸ್ಥಾನ ಅರ್ಚಕನ ಮೊಬೈಲ್ ವಶಕ್ಕೆ
ತಾ.27-10-2022ರ ಗುರುವಾರದ ನಿಮ್ಮ ಇಂದಿನ ರಾಶಿಭವಿಷ್ಯ ನೋಡಿ | Astrology