ಬೆಂಗಳೂರು : ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಈಗಾಗಲೇ ಕಾಂಗ್ರೆಸ್ ಹಾಗೂ ಬಿಜೆಪಿ ಜೋಡೋ ಹಾಗೂ ಸಂಕಲ್ಪ ಯಾತ್ರೆ ಮೂಲಕ ರಾಜ್ಯದ ವಿವಿಧ ಕ್ಷೇತ್ರಗಳಿಗೆ ಭೇಟಿ ನೀಡಿ ಜನರ ಗಮನ ಸೆಳೆದಿದೆ. ಈ ಬೆನ್ನಲ್ಲೇ ನ.1 ರಿಂದ ಜೆಡಿಎಸ್ ಕೂಡ ಯಾತ್ರೆ ನಡೆಸಲು ಸಿದ್ದವಾಗಿದೆ.

ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ನೇತೃತ್ವದಲ್ಲಿ ರಥಯಾತ್ರೆ 35 ದಿನಗಳ ಕಾಲ 6 ಜಿಲ್ಲೆಯ 35 ಕ್ಷೇತ್ರದಲ್ಲಿ ಸಂಚರಿಸಲಿದ್ದು, ನ. 1 ರಂದು ಯಾತ್ರೆಗೆ ಚಾಲನೆ ನೀಡಲಿದೆ.

ಎಲ್ಲೆಲ್ಲಿ ಸಂಚರಿಸಲಿದೆ ಯಾತ್ರೆ

ನವೆಂಬರ್ 1 ರಿಂದ 5 ರವರೆಗೆ ಕೋಲಾರ ಜಿಲ್ಲೆ, ನ. 6 ರಿಂದ 10 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆ, ನ 11 ರಿಂದ 13 ರವರೆಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ, ನ. 14 ರಿಂದ 23 ರವರೆಗೆ ತುಮಕೂರು ಜಿಲ್ಲೆ, ನ 24 ರಿಂದ 30 ರವರೆಗೆ ಹಾಸನ ಜಿಲ್ಲೆ, ಡಿಸೆಂಬರ್ 1 ರಂದು ಮತ್ತೆ ತುಮಕೂರು ಜಿಲ್ಲೆ ಮತ್ತು ಡಿ. 2 ರಿಂದ 5 ರವರೆಗೆ ರಾಮನಗರ ಜಿಲ್ಲೆಯಲ್ಲಿ ರಥಯಾತ್ರೆ ಸಾಗಲಿದೆ.

ನ. 1 ರಿಂದ 5 ರವರೆಗೆ ಕೋಲಾರ ಜಿಲ್ಲೆಯ 5 ಕ್ಷೇತ್ರದಲ್ಲಿ ಯಾತ್ರೆ ನಡೆಯಲಿದ್ದು, ನ. 1 ರಂದು ಕೋಲಾರದ ಮುಳಬಾಗಿಲು ವಿಧಾನಸಭಾ ಕ್ಷೇತ್ರದ ಕುರುಡುಮಲೆಯಿಂದ ಪಂಚರತ್ನ ರಥಯಾತ್ರೆ ಆರಂಭವಾಗಲಿದೆ. ನ. 6 ರಿಂದ 10 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಸಮಾವೇಶ ನಡೆಯಲಿದೆ. ನ.6 ರಿಂದ 10 ರವರೆಗೆ ಚಿಕ್ಕಬಳ್ಳಾಪುರ ಜಿಲ್ಲೆಯ 5 ಕ್ಷೇತ್ರಗಳಲ್ಲಿ ಸಮಾವೇಶ ನಡೆಯಲಿದೆ. ನ. 11 ರಿಂದ 13 ರವರೆಗೆ ಬೆಂಗಳೂರು ಗ್ರಾಮಾಂತರ ಜೊಲ್ಲೆಯ ಮೂರು ಕ್ಷೇತ್ರದಲ್ಲಿ ಯಾತ್ರೆ ಸಂಚರಿಸಲಿದೆ. ದೊಡ್ಡಬಳ್ಳಾಪುರ, ದೇವನಹಳ್ಳಿ, ನೆಲಮಂಗಲ ಕ್ಷೇತ್ರದಲ್ಲಿ ಸಮಾವೇಶ ನಡೆಯಲಿದೆ. ನ. 14 ರಿಂದ 23 ರವರೆಗೆ ತುಮಕೂರು ಜಿಲ್ಲೆಯ 10 ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ. ನ.24 ರಿಂದ 30 ರವರೆಗೆ ಹಾಸನ ಜಿಲ್ಲೆಯಲ್ಲಿ ನಡೆಯಲಿದೆ. ಡಿ. 1 ರಂದು ತುಮಕೂರು ಜಿಲ್ಲೆಯ ಕುಣಿಗಲ್ ಕ್ಷೇತ್ರ ಹಾಗೂ ಡಿ. 2 ರಿಂದ 5 ರವರೆಗೆ ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರದಲ್ಲಿ ಯಾತ್ರೆ ಸಂಚರಿಸಲಿದೆ.

BIGG NEWS : ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಭರ್ಜರಿ ಸಿದ್ಧತೆ : ನವೆಂಬರ್ ನಲ್ಲಿ ರಾಜ್ಯಾದ್ಯಂತ `ಬಸ್ ಯಾತ್ರೆ’

ಕ್ಷುಲ್ಲಕ ಕಾರಣಕ್ಕೆ ಗಲಾಟೆ : ಹಬ್ಬದ ದಿನವೇ ಮೈಸೂರಿನಲ್ಲಿ ಯುವಕನ ಬರ್ಬರ ಹತ್ಯೆ |Murder in Mysore

BIG NEWS : ಭಯೋತ್ಪಾದಕರ ದಾಳಿಯಿಂದ ಬೇಸತ್ತು 17 ಕಾಶ್ಮೀರಿ ಪಂಡಿತ್ ಕುಟುಂಬಗಳು ಕಣಿವೆಯನ್ನು ತೊರೆದಿವೆ: ಕೆಪಿಎಸ್ಎಸ್ ಮಾಹಿತಿ

Share.
Exit mobile version