ಬೆಂಗಳೂರು: ಕೋಲಾರ, ಮಂಡ್ಯ ಹಾಗೂ ಹಾಸನ ಕ್ಷೇತ್ರಗಳಿಗೆ ಮಾರ್ಚ್.23ರ ನಂತ್ರ ಜೆಡಿಎಸ್ ಪಕ್ಷದಿಂದ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುತ್ತದೆ. ಯಾರಿಗೂ ಆಂತಕ ಬೇಡ, ಎಲ್ಲಾ ಒಳ್ಳೇಯದೇ ಆಗುತ್ತದೆ ಎಂಬುದಾಗಿ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜೆಡಿಎಸ್ ಪಕ್ಷವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದ ಮಿತ್ರಪಕ್ಷ ಬಿಜೆಪಿ ಬಗ್ಗೆ ಬೇಸರ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ಕೋಲಾರ ಲೋಕಸಭೆ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟು ಕೊಡಲು ವಿಳಂಬ ಮಾಡುತ್ತಿರುವ ಬಗ್ಗೆ ಅತೃಪ್ತಿಯನ್ನು ಹೊರ ಹಾಕಿದರು.
ರಾಜ್ಯದ ಅನೇಕ ಕ್ಷೇತ್ರಗಳಲ್ಲಿ ಜೆಡಿಎಸ್ ಪಕ್ಷಕ್ಕೆ ಶಕ್ತಿ ಇದೆ ಅಂತ ಎಲ್ಲರಿಗೂ ಗೊತ್ತು. ರಾಜಕೀಯ ವಿಶ್ಲೇಷಣೆ ಮಾಡುವ ಎಲ್ಲರಿಗೂ ಈ ವಿಷಯ ಗೊತ್ತಿದೆ. ಬಿಜೆಪಿ ಅವರು ಇದನ್ನೆಲ್ಲ ಗಮನಿಸುತ್ತಾರೆ. ಅದನ್ನು ಸರಿಯಾಗಿ ಉಪಯೋಗ ಮಾಡಿಕೊಳ್ಳಿ ಅಂತ ಹೇಳೋಕೆ ನಾವು ಸಭೆ ಮಾಡಿದ್ದು ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.
ನಮ್ಮ ಪಕ್ಷದ ಕಾರ್ಯಕರ್ತರು, ಬಿಜೆಪಿ ಕಾರ್ಯಕರ್ತರು ಗೊಂದಲಕ್ಕೆ ಎಡೆ ಮಾಡಿಕೊಡದೆ ಒಟ್ಟಾಗಿ ಕೆಲಸ ಮಾಡಿ. ಅದು ನನ್ನ ವಿನಂತಿ. ನಮ್ಮ ಗುರಿ ನಾವು ಮುಟ್ಟ ಬೇಕು. ನಮ್ಮ ಗುರಿ ಅಧಿಕಾರ ಅಲ್ಲ, ರಾಜ್ಯದ ಅಭಿವೃದ್ಧಿ ಮಾತ್ರ. 75 ವರ್ಷಗಳಿಂದ ನಮ್ಮ ರಾಜ್ಯಕ್ಕೆ ಅನ್ಯಾಯ ಆಗಿದೆ. ಮೈತ್ರಿ ಕಾರಣ ನಮ್ಮ ರಾಜ್ಯದ ಅಭಿವೃದ್ಧಿಗೆ ಪರಿಹಾರ ತರಬೇಕು. ನಿತ್ಯ ಕೇಂದ್ರದ ಮೇಲೆ ಆರೋಪ ಮಾಡುವ ಕಾಂಗ್ರೆಸ್ 45 ವರ್ಷ ರಾಜ್ಯ, ದೇಶವನ್ನು ಆಳಿದೆ. ಕಾಂಗ್ರೆಸ್ ನ ಕೊಡುಗೆ ರಾಜ್ಯಕ್ಕೆ ಏನು? ನಿಮ್ಮಿಂದ ರಾಜ್ಯಕ್ಕೆ ಅನ್ಯಾಯ ಆಗಿದೆ. ಇದನ್ನು ಸರಿ ಮಾಡೋಕೆ ನಮ್ಮ ಮೈತ್ರಿ ಆಗಿದೆ. ಲೋಕಸಭೆಯಲ್ಲಿ ದನಿ ಗಟ್ಟಿಯಾಗಿರಬೇಕು. ಲೋಕಸಭೆಯಲ್ಲಿ ನಮ್ಮ ದನಿ ಇರಬೇಕು ಎಂದು ಹೇಳಿದರು.
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ನಾಳೆ ‘ವಿಶೇಷ ಸಾಂದರ್ಭಿಕ ರಜೆ’ ಮಂಜೂರು
ಶೇ.60ರಷ್ಟು ‘ಕನ್ನಡ ಬೋರ್ಡ್’ ಹಾಕದ ಮಳಿಗೆಗಳಿಗೆ ಬೀಗ ಹಾಕುವಂತಿಲ್ಲ: ರಾಜ್ಯ ಸರ್ಕಾರಕ್ಕೆ ‘ಹೈಕೋರ್ಟ್’ ಸೂಚನೆ