ಬೆಂಗಳೂರು : ಲೋಕಸಭೆ ಚುನಾವಣೆಯಲ್ಲಿ ಈ ಬಾರಿ ಹಾಸನ, ಮಂಡ್ಯ ಹಾಗೂ ಕೋಲಾರದಲ್ಲಿ ಜೆಡಿಎಸ್ ಸ್ಪರ್ಧಿಸಲಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಲ್ಲಿ ಯಾವುದೇ ಗೊಂದಲ ಇಲ್ಲ. ಹಾಸನ, ಮಂಡ್ಯ ಹಾಗೂ ಕೋಲಾರ ಲೋಕಸಭೆ ಕ್ಷೇತ್ರಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳು ಸ್ಪರ್ಧಿಸಲಿದ್ದಾರೆ ಎಂದು ತಿಳಿಸಿದ್ದಾರೆ. ನಾವು ಬಿಜೆಪಿಗೆ ೩-೪ ಸೀಟುಗಳನ್ನು ಕೇಳಿದ್ದು, ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಕೇವಲ ಎರಡು ಕ್ಷೇತ್ರ ತೆಗೆದುಕೊಳ್ಳೋಕೆ ನಾನು ಇಷ್ಟು ಪ್ರಯತ್ನ ಮಾಡಬೇಕಿತ್ತಾ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಹೃದಯ ಸಂಬಂಧಿ ಸಮಸ್ಯೆ ಹಿನ್ನೆಲೆಯಲ್ಲಿ ಶಸ್ತ್ರಚಿಕಿತ್ಸೆಗಾಗಿ ಕುಮಾರಸ್ವಾಮಿ ಅವರು ಇಂದು ಚೆನ್ನೈಗೆ ಪ್ರಯಾಣ ಬೆಳಸಲಿದ್ದಾರೆ. ಚೆನ್ನೈನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಆರೋಗ್ಯ ತಪಾಸಣೆಗೆ ಒಳಗಾಗಲಿದ್ದಾರೆ. ಮಾರ್ಚ್ 21 ರಂದು ಕುಮಾರಸ್ವಾಮಿ ಅವರಿಗೆ ಹೃದಯ ಶಸ್ತ್ರ ಚಿಕಿತ್ಸೆ ನಡೆಯಲಿದ್ದು, ಬಳಿಕ ಮಾರ್ಚ್ 24 ರವರೆಗೆ ಅವರು ಆಸ್ಪತ್ರೆಯಲ್ಲೇ ಚಿಕಿತ್ಸೆ ಪಡೆದು ಮಾ.25 ರಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ ಎಂದು ವರದಿಯಾಗಿದೆ.

Share.
Exit mobile version