Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ: ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ
KARNATAKA

ಬೆಂಗಳೂರಿನಲ್ಲಿ ಜೆಡಿಎಸ್ ಮಹತ್ವದ ಸಭೆ: ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ ತಯಾರಿ ಬಗ್ಗೆ ಚರ್ಚೆ

By kannadanewsnow0902/03/2025 5:19 PM

ಬೆಂಗಳೂರು: ಪಕ್ಷದ ದ್ವೈವಾರ್ಷಿಕ ಚುನಾವಣೆ, ಸದಸ್ಯತ್ವ ಅಭಿಯಾನ ಹಾಗೂ ಮುಂಬರುವ ತಾಲ್ಲೂಕು-ಜಿಲ್ಲಾ ಪಂಚಾಯಿತಿ ಚುನಾವಣೆ, ವಿಧಾನಮಂಡಲ ಕಲಾಪದಲ್ಲಿ ಅನುಸರಿಸಬೇಕಾದ ಕಾರ್ಯತಂತ್ರ ಇತ್ಯಾದಿ ಅಂಶಗಳ ಬಗ್ಗೆ ಜೆಡಿಎಸ್ ಮಹತ್ವದ ಸಭೆಯಲ್ಲಿ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರ ಮುಂದಾಳತ್ವದಲ್ಲಿ ನಡೆದ ಸಭೆಯಲ್ಲಿ ಮೇಲಿನ ಎಲ್ಲ ವಿಷಯಗಳ ಬಗ್ಗೆ ಸುದೀರ್ಘವಾಗಿ ಸಮಾಲೋಚನೆ ನಡೆಸಲಾಯಿತು.

ಈಗಾಗಲೇ ರಾಜ್ಯದ ಉದ್ದಗಲಕ್ಕೂ ಪಕ್ಷದ ವತಿಯಿಂದ ಸದಸ್ಯತ್ವ ಅಭಿಯಾನ ಚಾಲ್ತಿಯಲ್ಲಿದ್ದು, ಅದನ್ನು ಮತ್ತೊಂದು ಹಂತಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಮುಖಂಡರ ಜತೆ ತಮ್ಮದೇ ಆದ ಪರಿಕಲ್ಪನೆಗಳನ್ನು ಹಂಚಿಕೊಂಡರು.

ಸದಸ್ಯತ್ವ ಅಭಿಯಾನಕ್ಕೆ ಮತ್ತಷ್ಟು ವೇಗ ನೀಡಬೇಕು. ಶಾಸಕರು, ಮಾಜಿ ಶಾಸಕರು, ಹಿರಿಯ ಮುಖಂಡರು, ಎರಡನೇ ಹಂತದ ನಾಯಕರು ಹಾಗೂ ಕಾರ್ಯಕರ್ತರು ದೊಡ್ಡ ಪ್ರಮಾಣದಲ್ಲಿ ಸದಸ್ಯತ್ವ ನೋಂದಣಿ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ನಿಖಿಲ್ ಕುಮಾರಸ್ವಾಮಿ ಅವರು ಒತ್ತಿ ಹೇಳಿದರು.

ಇದಕ್ಕೆ ಸ್ಪಂದಿಸಿದ ಮಾಜಿ ಪ್ರಧಾನಿಗಳಾದ ದೇವೇಗೌಡರು ಹಾಗೂ ಕೇಂದ್ರ ಸಚಿವರಾದ ಕುಮಾರಸ್ವಾಮಿ ಅವರು, ಸದಸ್ಯತ್ವ ನೋಂದಣಿಯನ್ನು ಎಲ್ಲಾ ಮುಖಂಡರು ಗಂಭೀರವಾಗಿ ಪರಿಗಣಿಸಬೇಕು. ಸಂಘಟನೆಯ ಬಗ್ಗೆ ಅಸಡ್ಡೆ ಬೇಡ ಎಂದು ಕಿವಿಮಾತು ಹೇಳಿದರು.

ಹಿಂದೆ ಇಪ್ಪತ್ತಮೂರು ಜಿಲ್ಲೆಗಳು ಇದ್ದವು. ನಾನು ಪ್ರತಿ ಜಿಲ್ಲೆ, ತಾಲ್ಲೂಕಿನಲ್ಲಿ ಪ್ರವಾಸ ಮಾಡಿದ್ದೇನೆ. ಕಷ್ಟಪಟ್ಟು ಪಕ್ಷ ಕಟ್ಟಿದ್ದೇನೆ. ಈಗಲೂ ಓಡಾಟ ಮಾಡುತ್ತಿದ್ದೇನೆ. ಪಕ್ಷ ಕಟ್ಟೋದು ಸುಲಭದ ಕೆಲಸವಲ್ಲ. ಹೀಗಾಗಿ ಯಾರೊಬ್ಬರೂ ಸಂಘಟನೆಯನ್ನು ಲಘುವಾಗಿ ತೆಗೆದುಕೊಳ್ಳುವುದು ಬೇಡ ಎಂದು ಮಾಜಿ ಪ್ರಧಾನಿಗಳು ಮುಖಂಡರಿಗೆ ತಾಕೀತು ಮಾಡಿದರು.

ಯಾರೂ ಎದೆಗುಂದಬೇಕಿಲ್ಲ. ಜಿಲ್ಲೆ, ತಾಲ್ಲೂಕು ಮಟ್ಟದಲ್ಲಿ ಸಮಾವೇಶಗಳನ್ನು ಮಾಡೋಣ. ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ಚುನಾವಣೆಯಲ್ಲಿ ಗೆಲ್ಲುವ ಸಮರ್ಥ ಅಭ್ಯರ್ಥಿಗಳನ್ನು ಹುಡುಕಿ ಪಟ್ಟಿ ಮಾಡಿ. ಯಾರೂ ನನ್ನನ್ನು ರಾಷ್ಟ್ರೀಯ ಅಧ್ಯಕ್ಷ ಎಂದು ಕರೆಯಬೇಡಿ. ಒಬ್ಬ ಕಾರ್ಯಕರ್ತ ಎಂದು ಕರೆಯಿರಿ ಸಾಕು. ಎಲ್ಲಿಗೆ ಬೇಕಾದರೂ ಕರೆಯಿರಿ, ಬರುತ್ತೇನೆ. ನಿಮ್ಮ ಜತೆಯಲ್ಲಿ ಹೋರಾಟ ಮಾಡುತ್ತೇನೆ ಎಂದು ಮಾಜಿ ಪ್ರಧಾನಿಗಳು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ಚುನಾವಣೆ ಬಂದಾಗ ಎಚ್ಚೆತ್ತುಕೊಂಡರೆ ಉಪಯೋಗವಿಲ್ಲ: ಹೆಚ್ಡಿಕೆ

ಲೋಕಸಭೆ, ವಿಧಾನಸಭೆ ಅಥವಾ ಇನ್ನಾವುದೇ ಚುನಾವಣೆ ಬಂದಾಗ ಎಚ್ಚೆತ್ತರೆ ಉಪಯೋಗ ಇಲ್ಲ. ಹಲವು ವರ್ಷಗಳಿಂದಲೇ ನಾವು ಸಂಘಟನೆಗೆ ಶಕ್ತಿ ತುಂಬಿ ಜನರ ಜತೆ ಇದ್ದರೆ ಚುನಾವಣೆಯಲ್ಲಿ ಪ್ರಬಲ ಪೈಪೋಟಿ ನೀಡಬಹುದು. ಇಲ್ಲವಾದರೆ ನಮ್ಮ ಶ್ರಮ ವ್ಯರ್ಥವಾಗುತ್ತದೆ ಎಂದು ಕೇಂದ್ರ ಸಚಿವರಾದ ಕುಮಾರಸ್ವಾಮಿ ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನಾಯಕನಾಗುವ ಕನಸು ಕಟ್ಟಿಕೊಂಡರೆ ಸಾಲದು. ಅದಕ್ಕೆ ಮೂಲ ಬಂಡವಾಳ ಎಂದರೆ ಪಕ್ಷ ಸಂಘಟನೆ. ನಿಮ್ಮ ಕ್ಷೇತ್ರ, ಮತಗಟ್ಟೆ, ತಾಲೂಕು, ಜಿಲ್ಲಾ ಕೇಂದ್ರಗಳಲ್ಲಿ ಸಂಘಟನೆಯನ್ನು ಬಲವಾಗಿ ಕಟ್ಟಿ. ಸದಸ್ಯತ್ವ ಅಭಿಯಾನವನ್ನು ವೇಗಯುತವಾಗಿ ನಡೆಸಬೇಕು. ಯುವಜನರು, ರೈತರು, ಕೃಷಿ ಕಾರ್ಮಿಕರು ಹೆಚ್ಚು ಸಂಖ್ಯೆಯಲ್ಲಿ ಪಕ್ಷ ಸೇರ್ಪಡೆ ಆಗಬೇಕು ಎಂದು ಸಚಿವರು ಹೇಳಿದರು.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾದ ಸುರೇಶ್ ಬಾಬು, ಬಿ.ಎಂ.ಫಾರೂಕ್, ಜೆಡಿಎಸ್ ರಾಜ್ಯ ಮಹಿಳಾ ಅಧ್ಯಕ್ಷೆ ರಶ್ಮಿ ರಾಮೇಗೌಡ, ಮಾಜಿ ಸಚಿವರಾದ ವೆಂಕಟರಾವ್ ನಾಡಗೌಡ, ಬಂಡೆಪ್ಪ ಕಾಶೆಂಪೂರ್, ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಶಾಸಕರಾದ ರಾಜಾ ವೆಂಕಟಪ್ಪ ನಾಯಕ, ಡಾ. ಕೆ.ಅನ್ನದಾನಿ, ಕೆ.ಎ. ತಿಪ್ಪೇಸ್ವಾಮಿ ಮುಂತಾದವರು ವೇದಿಕೆಯ ಮೇಲಿದ್ದರು.

Share. Facebook Twitter LinkedIn WhatsApp Email

Related Posts

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM1 Min Read

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM2 Mins Read

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM1 Min Read
Recent News

BREAKING : ವ್ಯಾಪಾರ ಉದ್ವಿಗ್ನತೆ ನಡುವೆ ‘ಪ್ರಧಾನಿ ಮೋದಿ’ ಜೊತೆ ಅಮೆರಿಕಾ ಅಧ್ಯಕ್ಷ ‘ಟ್ರಂಪ್’ ಮಾತುಕತೆ!

02/02/2026 9:35 PM

ನಿಮ್ಗೆ ಹೊಟ್ಟೆ ನೋವು ಆಗುತ್ತಾ.? ಜಾಗರೂಕರಾಗಿರಿ, ಇದು ಅಪಾಯಕಾರಿ ಕಾಯಿಲೆಯಾಗಿರ್ಬೋದು!

02/02/2026 9:28 PM

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

02/02/2026 8:31 PM

BREAKING : ಮತಾಂತರ ವಿರೋಧಿ ಕಾನೂನುಗಳ ಕುರಿತು ಕೇಂದ್ರ ಮತ್ತು 12 ರಾಜ್ಯಗಳಿಗೆ ಸುಪ್ರೀಂಕೋರ್ಟ್ ನೋಟಿಸ್ ಜಾರಿ!

02/02/2026 8:18 PM
State News
KARNATAKA

ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 11 ತಹಶೀಲ್ದಾರ್ ವರ್ಗಾವಣೆ | Tahashildar Transfer

By kannadanewsnow0902/02/2026 8:31 PM KARNATAKA 1 Min Read

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 11 ಮಂದಿ ತಹಶೀಲ್ದಾರ್ ಅವರನ್ನು ವರ್ಗಾವಣೆ ಮಾಡಿ ಸರ್ಕಾರ…

BREAKING: ರಾಜ್ಯದ 3,862 ಪ್ರಾಥಮಿಕ, ಪ್ರೌಢಶಾಲೆಗಳಲ್ಲಿ ‘ಸ್ಮಾರ್ಟ್ ಕ್ಲಾಸ್ ರೂಂ’ ಸ್ಥಾಪಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ

02/02/2026 8:13 PM

ಫೆ.5ರಿಂದ ಪಿಜಿ ವೈದ್ಯಕೀಯಕ್ಕೆ ಆಪ್ಷನ್ಸ್ ಎಂಟ್ರಿ ಆರಂಭ: ಕೆಇಎ

02/02/2026 8:12 PM

JOB ALERT: 10ನೇ ಕ್ಲಾಸ್ ಪಾಸ್ ಆದವರೇ ಗಮನಿಸಿ: ಗ್ರಾಮೀಣ ಅಂಚೆ ಸೇವಕರ ನೇಮಕಾತಿಗೆ ಅರ್ಜಿ ಆಹ್ವಾನ

02/02/2026 6:33 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.