ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸುವ ಜೆಡಿಎಸ್ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಘೋಷಿಸಿದ್ದಾರೆ.
BIGG NEWS : ಒನಕೆ ಓಬವ್ವ ಹೆಸರಲ್ಲಿ ನಿಗಮ, ಕಾಲೇಜು, ಕಲಿಕಾ ಪೀಠ ಸ್ಥಾಪನೆ : ಸಿಎಂ ಬೊಮ್ಮಾಯಿ ಘೋಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಬೆಂಗಳೂರಿನಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲಿರುವ ಜೆಡಿಎಸ್ ನ 100 ಕ್ಕೂ ಹೆಚ್ಚು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯನ್ನು ಜೆಡಿಎಸ್ ಪಕ್ಷದ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಬಿಡುಗಡೆ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ.
ಶುಕ್ರವಾರವೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಬೇಕಿತ್ತು, ಆದರೆ ಧಾರ್ಮಿಕ ವೇದಿಕೆಯಲ್ಲಿ ರಾಜಕೀಯ ಬೇಡ ಸುಮ್ಮನಾದೆ. ಅಲ್ಲದೇ ಟಿಟಿಡಿಯ ಗೈಡ್ ಲೈನ್ ಉಲ್ಲಂಘನೆ ಆಗಬಾರದು ಎಂದು ಮುಂದೂಡಿದ್ದೇವೆ ಎಂದರು. ಶುಕ್ರವಾರ ಶ್ರೀನಿವಾಸ ಕಲ್ಯಾಣ ಮುಗಿದ ನಂತರ ದೇವರ ಅನುಗ್ರಹ ಪಡೆದು 97 ರಿಂದ 116 ಸಂಭವನೀಯ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತೇವೆ ಎಂದು ಕುಮಾರಸ್ವಾಮಿ ಅವರು ಘೋಷಿಸಿದ್ದರು. ಆದರೆ ಕಾರಣಾಂತರಗಳಿಂದ ಸೋಮವಾರ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.