ಮೈಸೂರು: ಈಗಾಗಲೇ ಜೆಡಿಎಸ್ ಪಕ್ಷದಿಂದ ( JDS Party ) ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿತ್ತು. 93 ಅಭ್ಯರ್ಥಿಗಳ ಪಟ್ಟಿಯ ಬಳಿಕ, ಈಗ ಎರಡನೇ ಪಟ್ಟಿ ಬಿಡುಗಡೆಗೂ ಪಕ್ಷ ಸಿದ್ಧವಾಗಿದೆ.
ಈ ಕುರಿತಂತೆ ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿಯವರು ಸಕ್ರಾಂತಿ ಬಳಿಕ ಜೆಡಿಎಸ್ ಪಕ್ಷದ ಅಭ್ಯರ್ಥಿಗಳ 2ನೇ ಪಟ್ಟಿಯನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿದರು.
ರಾಜ್ಯದಲ್ಲಿ ಚುನಾವಣೆಗೂ ಮುನ್ನವೇ ಬಿಜೆಪಿಯಿಂದ ಆಪರೇಷನ್ ಕಮಲ ಆರಂಭಿಸಲಾಗಿದೆ. ಆದ್ರೇ ಈ ಬಾರಿ ಸಮ್ಮಿಶ್ರ ಸರ್ಕಾರ ಬರುವುದಿಲ್ಲ. ಬಹುಮತದ ಪಡೆದಂತ ಕನ್ನಡಿಕರ ಪಕ್ಷವೇ ಅಧಿಕಾರಕ್ಕೆ ಬರಲಿದೆ ಎಂದರು.
ರಾಜ್ಯದಲ್ಲಿ ಬಿಜೆಪಿಯನ್ನು ಸೋಲಿಸಲು ಜೆಡಿಎಸ್ ಪಣ ತೊಟ್ಟಿದೆ. ನಾವು ಕೇವಲ 35 ಸೀಟ್ ಗೆಲ್ಲುವುದಿಲ್ಲ. 135 ಸ್ಥಾನವನ್ನು ಗೆಲ್ಲುತ್ತೇವೆ. ಈ ಮೂಲಕ ಕರ್ನಾಟಕದಲ್ಲಿ ಕನ್ನಡಿಕರ ಪಕ್ಷ ಅಧಿಕಾರಕ್ಕೆ ಬರೋದು ಶತಸಿದ್ಧ ಎಂದು ಹೇಳಿದರು.
ದೇವೇಗೌಡರ ಕುಟುಂಬವನ್ನು ಭ್ರಷ್ಟರು ಎಂದು ಅಮಿತ್ ಶಾ ಹೇಳಿದ್ದಾರೆ. ಆ ಮೂಲಕ ತಮ್ಮ ಗುಂಡಿಯನ್ನು ತಾವೇ ತೋಡಿಕೊಂಡಿದ್ದಾರೆ. ನಮ್ಮ ಕುಟುಂಬ ಭ್ರಷ್ಟರು ಎನ್ನುವುದಕ್ಕೆ ಒಂದೇ ಒಂದು ಉದಾಹರಣೆ ಇಲ್ಲ. ಬಿಜೆಪಿಯ ಅಂತ್ಯ ಮಂಡ್ಯದಿಂದಲೇ ಆರಂಭವಾಗಲಿದೆ ಎಂಬುದಾಗಿ ವಾಗ್ಧಾಳಿ ನಡೆಸಿದರು.
BIGG NEWS : ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ : ಹನಿ ನೀರಾವರಿಗೆ ಸಹಾಯಧನ ಪಡೆಯಲು ಅರ್ಜಿ ಆಹ್ವಾನ