ಬೆಂಗಳೂರು: ರಾಜ್ಯ ಸರ್ಕಾರವು ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳದ ವಿರುದ್ಧ ಬಿಜೆಪಿ ಬೆನ್ನಲ್ಲೇ ಜೆಡಿಎಸ್ ಪಕ್ಷದ ನಾಯಕರು ಸಿಡಿದೆದ್ದಿದ್ದಾರೆ. ಇಂದು ಬಿಜೆಪಿ ಪ್ರತಿಭಟನೆಯ ನಂತ್ರ, ನಾಳೆ ಜೆಡಿಎಸ್ ಕರೆ ನೀಡಿದೆ. ನಾಳೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಿರ್ಧಾರ ಕೈಗೊಳ್ಳಲಾಗಿದೆ. ಅಲ್ಲದೇ ವಿಧಾನಸೌಧಕ್ಕೂ ಮುತ್ತಿಗೆ ಹಾಕೋದಕ್ಕೆ ನಿರ್ಧರಿಸಿದೆ.

ಈ ಕುರಿತಂತೆ ಮಾಜಿ ಶಾಸಕರು ಹಾಗೂ ಬೆಂಗಳೂರು ಮಹಾನಗರ ಜನತಾದಳ (ಜಾತ್ಯತೀತ) ಅಧ್ಯಕ್ಷರಾದಂತ ಹೆಚ್.ಎಂ ರಮೇಶ್ ಗೌಡ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು,  ಲೋಕಸಭೆ ಚುನಾವಣೆ ಮುಗಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ಸರ್ಕಾರವು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಏರಿಕೆ ಮಾಡಿರುವುದನ್ನು ಖಂಡಿಸಿ ಹಾಗೂ ಏರಿಕೆ ಮಾಡಿರುವ ಪೆಟ್ರೋಲ್ ಡೀಸೆಲ್ ದರವನ್ನು ಕೂಡಲೆ ಕೈ ಬಿಡುವಂತೆ ಒತ್ತಾಯಿಸಿ ಬೆಂಗಳೂರು ಮಹಾನಗರ ಜನತಾದಳ ಜಾತ್ಯಾತೀತ ಪಕ್ಷದ ವತಿಯಿಂದ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಬೃಹತ್ ಪ್ರತಿಭಟನೆ ಯನ್ನು ಹಮ್ಮಿಕೊಳ್ಳಲಾಗಿದೆ ಮತ್ತು ನಂತರ ಫ್ರೀಡಂ ಪಾರ್ಕ್ ನಿಂದ ಹೊರಟು ವಿಧಾನಸೌಧಕ್ಕೆ ಮುತ್ತಿಗೆ ಹಾಕಲಾಗುವುದು ಎಂದಿದ್ದಾರೆ.

ನಾಳೆ ಬೆಳಿಗ್ಗೆ 11.30ರ ವೇಳೆ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತದೆ. ಅಲ್ಲಿಂದ ವಿಧಾನಸೌಧದವರೆಗೆ ಮೆರವಣಿಗೆ ಮೂಲಕ ತೆರಳಿ, ಮುತ್ತಿಗೆ ಹಾಕೋದಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಅಂತ ತಿಳಿಸಿದ್ದಾರೆ.

ಈ ಪ್ರತಿಭಟನೆ, ವಿಧಾನಸೌಧ ಮುತ್ತಿಗೆ ಕಾರ್ಯಕ್ರಮದಲ್ಲಿ ಪಕ್ಷದ ಮುಖಂಡರು, ಸಂಸದರು, ಶಾಸಕರು, ಮಾಜಿ ಸಚಿವರು, ಮಾಜಿ ಸಂಸದರು, ಮಾಜಿ ಶಾಸಕರು, ಪದಾಧಿಕಾರಿಗಳು, ವಿಧಾನಸಭಾ ಕ್ಷೇತ್ರ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ವಿವಿಧ ವಿಭಾಗಗಳ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು, ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಅಭ್ಯರ್ಥಿಗಳು, ಬಿಬಿಎಂಪಿ ಮಾಜಿ ಸದಸ್ಯರು, ಮುಂಬರುವ ಬಿ.ಬಿ.ಎಂ.ಪಿ. ಚುನಾವಣೆಯಲ್ಲಿ ಸ್ಪರ್ಧಿಸಲು ಇಚ್ಚಿಸಿರುವ ಆಕಾಂಕ್ಷಿಗಳು ಹಾಗೂ ವಾರ್ಡ್ ಅಧ್ಯಕ್ಷರುಗಳು ತಪ್ಪದೆ ಪ್ರತಿಭಟನೆಯಲ್ಲಿ ಭಾಗವಹಿಸಬೇಕಾಗಿ ಮತ್ತು ತಮ್ಮೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರನ್ನು ಕರೆ ತರಬೇಕಾಗಿ ವಿನಂತಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BREAKING : ಜಾರ್ಖಂಡ್’ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ; ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ

BREAKING : ಜಾರ್ಖಂಡ್’ನಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ; ನಾಲ್ವರು ನಕ್ಸಲರ ಹತ್ಯೆ, ಇಬ್ಬರ ಬಂಧನ

Share.
Exit mobile version