ಬೆಂಗಳೂರು : 40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರಿಗೆ ಸ್ವಾಗತ ಎಂದು ಜೆಡಿಎಸ್ ಟ್ವೀಟ್ ಮಾಡಿದೆ.
ಪ್ರಧಾನಿ ಮೋದಿ ಬಂದಾಗ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಅಭಿವೃದ್ಧಿ ಪಡಿಸಿದ್ದ ರಸ್ತೆ ಕಿತ್ತು ಹೋದ ಸಂಗತಿ ರಾಜ್ಯದ ಜನತೆಗೆ ಗೊತ್ತಿದೆ. ಇಂತಹ ಲಜ್ಜೆಗೆಟ್ಟ ಸರ್ಕಾರಕ್ಕೆ, ಅದೇ ಪಕ್ಷದ ರಸ್ತೆ ಸಾರಿಗೆ ಹಾಗೂ ಹೆದ್ದಾರಿಯ ಕೇಂದ್ರ ಸಚಿವರಾಗಿರುವ ತಾವು ಯಾವ ಸಲಹೆ ಕೊಡಲು ಬಯಸುತ್ತೀರಿ? ಎಂದು ಕಿಡಿಕಾರಿದೆ.
ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್ ಗಳನ್ನು ನಿರ್ಮಿಸಿಲ್ಲ? ಎಂದು ಟ್ವೀಟ್ ನಲ್ಲಿ ಕಿಡಿಕಾರಿದೆ.
ಇದೇ ದಶಪಥ ರಸ್ತೆಯ ಭೂಸ್ವಾಧೀನ ಪ್ರಕ್ರಿಯೆಗೆ ಅಂದಿನ ಮುಖ್ಯಮಂತ್ರಿಗಳಾಗಿದ್ದ ಕುಮಾರಸ್ವಾಮಿ ಅವರು ಮಾಡಿದ ಸಭೆಗಳು, ನೀಡಿದ ನೆರವು ಮರೆತುಬಿಟ್ರಾ? ಇದೆಲ್ಲ ಹೋಗಲಿ, ನೀವು ಮಾಡಿರುವ ಕೆಲಸವಾದರೂ ನೆಟ್ಟಗಿದೆಯಾ? ಬಿಜೆಪಿ ಆಡಳಿತ ಬಂದ ನಂತರ ಈ ಯೋಜನೆಗೆ ಅವೈಜ್ಞಾನಿಕವಾಗಿ ಭೂಸ್ವಾಧೀನ ಪಡಿಸಿಕೊಂಡು ಲೂಟಿ ಹೊಡೆದ ವಿಷಯಗಳು ತಮಗೆ ತಿಳಿದಿಲ್ಲವೇ, @nitin_gadkari ಅವರೆ? ಅಥವಾ 40% ಕಮಿಷನ್ ಹೊಡೆಯುವ ದಂಧೆಯಲ್ಲಿ ನಿರತರಾಗಿರುವ ನಿಮ್ಮದೇ ರಾಜ್ಯ ಸರ್ಕಾರದಿಂದ ತಮಗೂ ಏನಾದರೂ ಪಾಲು ಸಿಕ್ಕಿದೆಯಾ? ಎಂದು ಟ್ವೀಟ್ ಮಾಡಿದೆ.
ಈ ರಸ್ತೆಯ ಕಾಮಗಾರಿಗೆ ಸಂಬಂಧಿಸಿದ ಮಹತ್ವದ ಕಾರ್ಯಗಳಿಗೆ ಅನುಕೂಲವಾಗುವ ಹಲವು ನಿರ್ಧಾಗಳನ್ನು ತೆಗೆದುಕೊಂಡಿದ್ದು ಅಂದಿನ ಮುಖ್ಯಮಂತ್ರಿ HDK ಅವರು. ವೈಮಾನಿನ ಸಮೀಕ್ಷೆಗೆ ಬಂದಿರುವ ಗಡ್ಕರಿ ಅವರೆ, ಈ ರಸ್ತೆ ಕಾಮಗಾರಿಯಲ್ಲಿ ನಡೆದ ಅಕ್ರಮದ ಬಗ್ಗೆ ತುಟಿ ಬಿಚ್ಚುತ್ತೀರೋ? ಎಂದು ಟ್ವೀಟ್ ಮಾಡಿದೆ.
ಸುರಕ್ಷತೆಗಿಂತ ಅಸುರಕ್ಷತೆಯೇ ಹೆಚ್ಚಾಗಿರುವ ಈ ರಸ್ತೆಯಲ್ಲಿ ಸಿಸಿಟಿವಿಗಳು ಯಾಕೆ ಅಳವಡಿಕೆಯಾಗಿಲ್ಲ? ಇವೇ ಕಾರಣಗಳಿಂದ ಸಂಭವಿಸಿರುವ ಹತ್ತಾರು ಅಪಘಾತಗಳಿಗೆ ಯಾರು ಜವಾಬ್ದಾರರು? ಅಪಘಾತ ತಡೆ ಸಂಬಂಧ ಪೆಟ್ರೋಲಿಂಗ್ ಯಾಕೆ ಇನ್ನೂ ಆರಂಭವಾಗಿಲ್ಲ? ಸರ್ವೀಸ್ ರಸ್ತೆಯಲ್ಲಿ ವೇಗ ಮಿತಿಗಾಗಿ ವೈಜ್ಞಾನಿಕವಾಗಿ ಹಂಪ್ ಗಳನ್ನು ನಿರ್ಮಿಸಿಲ್ಲ?
4/7 pic.twitter.com/RwO1WHBCbB— Janata Dal Secular (@JanataDal_S) January 5, 2023
40% ಕಮಿಷನ್ ಸರ್ಕಾರದ ಕಾರ್ಯಕ್ರಮದಲ್ಲಿ ಭಾಗಿಯಾಗಲು ಬೆಂಗಳೂರಿಗೆ ಬರುತ್ತಿರುವ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವ @nitin_gadkari ಅವರಿಗೆ ಸ್ವಾಗತ!
1/7— Janata Dal Secular (@JanataDal_S) January 5, 2023