ಪಾಟ್ನಾ: ಬಿಹಾರದ ಪಾಟ್ನಾ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಬೈಕ್ ನಲ್ಲಿ ಬಂದ ಅಪರಿಚಿತ ವ್ಯಕ್ತಿಗಳು ಜೆಡಿಯು ಕಾರ್ಯಕರ್ತನನ್ನು ಗುಂಡಿಕ್ಕಿ ಕೊಂದಿದ್ದಾರೆ. ನಿತೀಶ್ ಕುಮಾರ್ ಪಕ್ಷದ ಯುವ ಕಾರ್ಯಕರ್ತ ಸೌರಭ್ ಕುಮಾರ್ ಅವರು ಸಮಾರಂಭದಿಂದ ಹಿಂದಿರುಗುತ್ತಿದ್ದಾಗ ಜಿಲ್ಲೆಯ ಪುನ್ಪುನ್ ಪ್ರದೇಶದಲ್ಲಿ ಗುಂಡಿನ ದಾಳಿ ನಡೆದಿದೆ.
ಗುಂಡಿನ ದಾಳಿಯಲ್ಲಿ ಜೆಡಿಯು ಕಾರ್ಯಕರ್ತನ ಜೊತೆಗಿದ್ದ ಮತ್ತೊಬ್ಬ ವ್ಯಕ್ತಿ ಮುನ್ಮುನ್ ಕುಮಾರ್ ಕೂಡ ಗಾಯಗೊಂಡಿದ್ದಾರೆ.
ಪೊಲೀಸರ ಪ್ರಕಾರ, ಸೌರಭ್ ಕುಮಾರ್ ತನ್ನ ಸ್ನೇಹಿತರೊಂದಿಗೆ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು, ಹಿಂದಿರುಗುತ್ತಿದ್ದಾಗ ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಕುಮಾರ್ ಅವರನ್ನು ಕಂಕರ್ಬಾಗ್ ಉಮಾ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಆಗಲೇ ಗುಂಡೇಟಿಗೆ ಬಲಿಯಾಗಿದ್ದರು.
ಸೌರಭ್ ಕುಮಾರ್ ತನ್ನ ಸ್ನೇಹಿತರೊಂದಿಗೆ ಆರತಕ್ಷತೆ ಸಮಾರಂಭದಲ್ಲಿ ಭಾಗವಹಿಸಲು ಬಂದಿದ್ದರು. ಹಿಂದಿರುಗುವಾಗ ಅಪರಿಚಿತ ದುಷ್ಕರ್ಮಿಗಳು ಅವರನ್ನು ಗುಂಡಿಕ್ಕಿ ಕೊಂದರು, ನಂತರ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಮತ್ತು ಮುನ್ಮುನ್ ಕುಮಾರ್ ಎಂಬ ಇನ್ನೊಬ್ಬ ವ್ಯಕ್ತಿಗೂ ಗಾಯಗಳಾಗಿವೆ. ಅವರನ್ನು ಕಂಕರ್ಬಾಗ್ ಉಮಾ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಆದರೆ ಅಷ್ಟರಲ್ಲಿ ಸೌರಭ್ ಕುಮಾರ್ ನಿಧನರಾದರು; ನಾವು ಈ ವಿಷಯವನ್ನು ಪರಿಶೀಲಿಸುತ್ತಿದ್ದೇವೆ” ಎಂದು ಎಸ್ಡಿಪಿಒ ಮಸೌರ್ಹಿ ಕನ್ಹಯ್ಯ ಸಿಂಗ್ ಸುದ್ದಿ ಸಂಸ್ಥೆ ಎಎನ್ಐಗೆ ತಿಳಿಸಿದ್ದಾರೆ.