ಜಾರ್ಖಂಡ್ : ಶಾಲಾ ಆವರಣದ ಬಳಿ ಸಿಡಿಲು ಬಡಿದ ಪರಿಣಾಮ ಸುಮಾರು ಆರು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಜಾರ್ಖಂಡಿನ ಬೊಕಾರೊ ಜಿಲ್ಲೆಯಲ್ಲಿ ನಡೆದಿದೆ.
ಬೊಕಾರೊ ಜಿಲ್ಲೆಯ ಜರಿದಿಹ್ ಬ್ಲಾಕ್ನ ಬಂಧ್ದಿಹ್ ಶಾಲೆಯಲ್ಲಿ ಮಧ್ಯಾಹ್ನದ ತರಗತಿಗಳು ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ ಎಂದು ಅಧಿಕಾರಿ ತಿಳಿಸಿದ್ದಾರೆ.
BIGG NEWS : ಬೆಳೆಗಾವಿಯಲ್ಲಿ ಘೋರ ದುರಂತ : ಮದುವೆ ಒಪ್ಪದ ಪ್ರೇಯಸಿ ಕೊಂದು ಪ್ರಿಯಕರ ಆತ್ಮಹತ್ಯೆ!
ಶಾಲೆಯ ಸರಹದ್ದಿನ ಬಳಿ ಸಿಡಿಲು ಬಡಿದ ಸಂದರ್ಭದಲ್ಲಿ ಶಾಲೆಯಲ್ಲಿ 250 ವಿದ್ಯಾರ್ಥಿಗಳಿದ್ದರು. ಘಟನೆಯ ನಂತರ ಕನಿಷ್ಠ 50 ವಿದ್ಯಾರ್ಥಿಗಳಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು, ಗಂಭೀರವಾಗಿ ಗಾಯಗೊಂಡಿದ್ದ ಆರು ವಿದ್ಯಾರ್ಥಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಜರಿದಿಹ್ ಬ್ಲಾಕ್ ಅಭಿವೃದ್ಧಿ ಅಧಿಕಾರಿ (ಬಿಡಿಒ) ಉಜ್ವಲ್ ಕುಮಾರ್ ಸೊರೆನ್ ತಿಳಿಸಿದ್ದಾರೆ.
ಗಾಯಗೊಂಡ ವಿದ್ಯಾರ್ಥಿಗಳನ್ನು ಅಲ್ಲಿನ ರೆಫರಲ್ ಆಸ್ಪತ್ರೆಯಲ್ಲಿ ತಪಾಸಣೆಗೆ ಒಳಪಡಿಸಲಾಗಿದ್ದು, ನಾಲ್ಕು ವಿದ್ಯಾರ್ಥಿಗಳನ್ನು ಹೊರತುಪಡಿಸಿ ಎಲ್ಲಾ ವಿದ್ಯಾರ್ಥಿಗಳನ್ನು ಡಿಸ್ಚಾರ್ಜ್ ಮಾಡಲಾಗಿದೆ. ಇತ್ತ ಘಟನಾ ಸ್ಥಳಕ್ಕೆ ಉಪ ಅಭಿವೃದ್ಧಿ ಆಯುಕ್ತರು (ಡಿಡಿಸಿ) ಬ್ಲಾಕ್ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ ಎನ್ನಲಾಗುತ್ತಿದೆ.
BIGG NEWS : ಬಿ.ಎಸ್. ಯಡಿಯೂರಪ್ಪ ಇದೊಂದು ಬಾರಿ ಚುನಾವಣೆಯಲ್ಲಿ ಸ್ಪರ್ಧಿಸಬೇಕು : ಶಾಸಕ ರೇಣುಕಾಚಾರ್ಯ