ಕಥುವಾ (ಜಮ್ಮು ಮತ್ತು ಕಾಶ್ಮೀರ): ಕಾಣೆಯಾಗಿದ್ದ ಜಮ್ಮು ಮತ್ತು ಕಾಶ್ಮೀರದ ಬಿಜೆಪಿ ನಾಯಕರೊಬ್ಬರು ಮಂಗಳವಾರ ಇಲ್ಲಿನ ಕಥುವಾದ ಹೀರಾನಗರ ಪಟ್ಟಣದಲ್ಲಿ ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಅವರ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ. ಹೀಗಾಗಿ, ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
ಪೊಲೀಸ್ ಮೂಲಗಳ ಪ್ರಕಾರ, ಬಿಜೆಪಿ ಮುಖಂಡ ಸೋಮ್ ರಾಜ್ ಅವರ ಶವ ಹೀರಾನಗರ ಪಟ್ಟಣದಲ್ಲಿರುವ ಅವರ ಮನೆಯಿಂದ ಸ್ವಲ್ಪ ದೂರದಲ್ಲಿನ ಮರದಲ್ಲಿ ನೇತಾಡುತ್ತಿರುವುದನ್ನು ಗ್ರಾಮಸ್ಥರು ಬೆಳಿಗ್ಗೆ ನೋಡಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಈ ವೇಳೆ ಸ್ಥಳಕ್ಕಾಗಮಿಸಿದ ಪೊಲೀಸರು, ರಕ್ತದ ಗುರುತುಗಳಿದ್ದ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಉಪ ಜಿಲ್ಲಾ ಆಸ್ಪತ್ರೆಗೆ (SDH) ಹಿರಾನಗರ ಆಸ್ಪತ್ರೆಗೆ ಕಳುಹಿಸಿತ್ತು.
ರಾಜ್ ಸೋಮವಾರದಿಂದ ನಾಪತ್ತೆಯಾಗಿದ್ದು, ಮಂಗಳವಾರ ಮರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಸಂಬಂಧ ಹೀರಾನಗರ ಪೊಲೀಸರು ಸೆಕ್ಷನ್ 174 ಸಿಆರ್ಪಿಸಿ ಅಡಿಯಲ್ಲಿ ವಿಚಾರಣೆ ಪ್ರಕ್ರಿಯೆಗಳನ್ನು ಪ್ರಾರಂಭಿಸಿದ್ದಾರೆ. ಅವರ ಸಾವಿನ ಕುರಿತು ತನಿಖೆ ನಡೆಸಬೇಕು ಎಂದು ಕುಟುಂಬಸ್ಥರು ಹಾಗೂ ಬಿಜೆಪಿಯ ಹಲವು ಮುಖಂಡರು ಆಗ್ರಹಿಸಿದ್ದಾರೆ. ವೈದ್ಯಕೀಯ ಮತ್ತು ಕಾನೂನು ವಿಧಿವಿಧಾನಗಳನ್ನು ಪೂರ್ಣಗೊಳಿಸಿದ ನಂತರ, ಮೃತ ದೇಹವನ್ನು ಅವರ ಕುಟುಂಬಕ್ಕೆ ಹಸ್ತಾಂತರಿಸಲಾಯಿತು.
ಈ ಬಗ್ಗೆ ತನಿಖೆ ನಡೆಸಲು ಎಸ್ಡಿಪಿಒ ಬಾರ್ಡರ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು (ಎಸ್ಐಟಿ) ರಚಿಸಲಾಗಿದೆ ಎಂದು ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್ಎಸ್ಪಿ) ಕಥುವಾ ಆರ್ಸಿ ಕೊತ್ವಾಲ್ ಹೇಳಿದ್ದಾರೆ.
Big news: ವೈದ್ಯಕೀಯ ತಪಾಸಣೆಗಾಗಿ ತಮ್ಮ ಮಕ್ಕಳೊಂದಿಗೆ ʻಸೋನಿಯಾ ಗಾಂಧಿʼ ವಿದೇಶ ಪ್ರವಾಸ: ಮೂಲಗಳು
Big news: ಚಿಕ್ಕ ಮಕ್ಕಳಲ್ಲಿ `ಟೊಮೆಟೊ ಜ್ವರ’ದ ಅಪಾಯ ಹೆಚ್ಚು: ಅಧ್ಯಯನ | tomato flu