ಬೆಂಗಳೂರು: ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದೆ.
ಇಂದು ಬುಧವಾರ ಕೂಡ ವಿವಿಯಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆ ಮುಂದುವರೆದಿದ್ದು, ವಿವಿ ರಸ್ತೆಯಲ್ಲಿ ಖಾಸಗಿ ವಾಹನಗಳಿಗೆ ನಿರ್ಬಂಧ ಹೇರಬೇಕು, ಗಂಭೀರವಾಗಿ ಗಾಯಗೊಂಡ ಶಿಲ್ಪಾ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದ್ದಾರೆ. ನಿನ್ನೆ ನಡೆದಂತಹ ಘಟನೆ ಮತ್ತೆ ಮರುಕಳಿಸಬಾರದು , ಗಾಯಗೊಂಡ ವಿದ್ಯಾರ್ಥಿನಿ ಶಿಲ್ಪಾ ಸ್ಥಿತಿ ಗಂಭೀರವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಾಲಕನ ಬಂಧನ
ಬಿಎಂಟಿಸಿ ಬಸ್ ಹರಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಂಟಿಸಿ ಬಸ್ ಚಾಲಕನನ್ನು ಪೊಲೀಸರು ಬಂಧಿಸಿದ್ದಾರೆ.ಚಾಲಕ ಸುರೇಶ್ ನನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿ ವಿಚಾರಣೆಗೊಳಪಡಿಸಿದ್ದಾರೆ,
ಜ್ಞಾನಭಾರತಿ ವಿಶ್ವವಿದ್ಯಾಲಯ ಕ್ಯಾಂಪಸ್ನಲ್ಲಿ ಬಸ್ ಹತ್ತುವಾಗ ಆಯತಪ್ಪಿ ಕೆಳಗೆ ಬಿದ್ದ ವಿದ್ಯಾರ್ಥಿನಿಯ ಮೇಲೆ ಬಿಎಂಟಿಸಿ ಬಸ್ ಹರಿದ ಪರಿಣಾಮ ಯುವತಿ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸುತ್ತಿದ್ದಾರೆ.
ಬಸ್ ಹತ್ತುವಾಗ ಕೆಳಗೆ ಬಿದ್ದ ಯುವತಿಯನ್ನು ಗಮನಿಸದೇ ಚಾಲಕ ಬಸ್ ಮುಂದಕ್ಕೆ ಚಲಾಯಿಸಿ ಅಜಾಗರೂಕತೆ ತೋರಿದ್ದಾನೆ. ಈ ಹಿನ್ನೆಲೆ ಯುವತಿ ಸೊಂಟದ ಮೇಲೆ ಬಸ್ ಹರಿದಿದ್ದು, ವಿದ್ಯಾರ್ಥಿನಿ ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಕೋಲಾರ ಮೂಲದ ಶಿಲ್ಪ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರು ಮೊದಲ ವರ್ಷದ ಪಿಜಿ ವ್ಯಾಸಂಗ ಮಾಡುತ್ತಿದ್ದಾರೆ. ಘಟನೆ ಖಂಡಿಸಿ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದರು.
ಯಕ್ಷಗಾನದ ಪೋಷಾಕು ತೊಟ್ಟು ಗಮನ ಸೆಳೆದ ಸಚಿವರು…! ಇವರು ಯಾರು ಗೊತ್ತಾಯ್ತಾ..?
BREAKING NEWS : ನ.14 ರಿಂದ ‘ ಹುಬ್ಬಳ್ಳಿಯಿಂದ ದೆಹಲಿಗೆ ನೇರ ವಿಮಾನ ಸೇವೆ’ ಆರಂಭ : ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ