ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಜ್ಞಾನವಾಪಿ ಮಸೀದಿಯಲ್ಲಿ ಶಿವಲಿಂಗ ಪತ್ತೆ ಹೇಳಿಕೆ ವಿಚಾರ ಸಂಬಂಧ ಅ.14 ಕ್ಕೆ ತೀರ್ಪು ಮುಂದೂಡಿ ವಾರಣಾಸಿ ಕೋರ್ಟ್ ಆದೇಶಿಸಿದೆ.
ಜ್ಞಾನವಾಪಿ ಮಸೀದಿ ಆವರಣದಲ್ಲಿ ( Gyanvapi Mosque premises ) ಕಂಡುಬಂದಿದೆ ಎಂದು ಹೇಳಲಾದ ಶಿವಲಿಂಗದ ವೈಜ್ಞಾನಿಕ ತನಿಖೆ ನಡೆಸುವಂತೆ ಕೋರಿ ಹಿಂದೂ ಭಕ್ತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ವಾರಣಾಸಿ ನ್ಯಾಯಾಲಯ ( Varanasi Court ) ಆದೇಶ ಮುಂದೂಡಿದೆ. ಉತ್ತರ ಪ್ರದೇಶದ ವಾರಾಣಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣ ನಡೆಸಿದ ಕೋರ್ಟ್ ಅ.14 ಕ್ಕೆ ಆದೇಶ ಮುಂದೂಡಿದೆ.
ಉತ್ತರ ಪ್ರದೇಶದ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದೊಳಗಿನ ಕೊಳದಲ್ಲಿ ಶಿವಲಿಂಗ ಪತ್ತೆಯಾಗಿದೆ ಎಂಬ ಹೇಳಿಕೆಯ ನಂತರ ನ್ಯಾಯಾಲಯವು ಆ ಸ್ಥಳವನ್ನ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಿ ಸೀಲ್ ಮಾಡುವಂತೆ ಆದೇಶಿಸಿತ್ತು.
ಮಸೀದಿಯ ಹಿಂದಿರುವ ದೇಗುಲದಲ್ಲಿ ಪ್ರಾರ್ಥನೆ ಸಲ್ಲಿಸಲು ಪ್ರವೇಶ ಕೋರಿ ಐವರು ಮಹಿಳೆಯರು ಅರ್ಜಿ ಸಲ್ಲಿಸಿದ ನಂತರ ಮಸೀದಿ ಸಂಕೀರ್ಣದ ಚಿತ್ರೀಕರಣಕ್ಕೆ ನ್ಯಾಯಾಲಯ ಆದೇಶಿಸಿದ್ದು, ಚಿತ್ರೀಕರಣದ ಕೊನೆಯ ದಿನದಂದು ಶಿವಲಿಂಗ ಅಥವಾ ಶಿವನ ಅವಶೇಷವು ಕಂಡುಬಂದಿದೆ ಎಂದು ಹೇಳಲಾಗಿತ್ತು.
ಹಾಲ್ ಟಿಕೆಟ್ ನಲ್ಲಿ ಬಾಲಿವುಡ್ ನಟಿ ‘ಐಶ್ವರ್ಯಾ ರೈ’ ಭಾವಚಿತ್ರ : ಫೋಟೋ ಕಂಡು ದಂಗಾದ ವಿದ್ಯಾರ್ಥಿನಿ..!
BIGG NEW : ದಾವೂದ್ ಇಬ್ರಾಹಿಂ ಗ್ಯಾಂಗ್ ಜೊತೆ ನಂಟು ಹೊಂದಿದ್ದ ಐವರನ್ನು ಬಂಧಿಸಿದ ಮುಂಬೈ ಪೊಲೀಸ್ | Dawood Ibrahim