ಮಡಿಕೇರಿ : ಭಾರತೀಯ ವಾಯುಪಡೆಯಿಂದ ಅಗ್ನಿಪತ್ ಯೋಜನೆಯಡಿಯಲ್ಲಿ ಅಗ್ನಿವೀರ್ ವಾಯು (01/2022) ಪ್ರವೇಶಕ್ಕೆ ಆಯ್ಕೆ ಪರೀಕ್ಷೆಗಾಗಿ ಅವಿವಾಹಿತ ಪುರುಷ ಅರ್ಹ ಅಭ್ಯರ್ಥಿಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅಪಘಾತಕ್ಕೀಡಾದ ವ್ಯಕ್ತಿಯನ್ನು ಆಸ್ಪತ್ರೆಗೆ ಸಾಗಿಸಲು ಸಹಾಯ ಮಾಡಿದ ರಾಹುಲ್ ಗಾಂಧಿ | Watch

ಅರ್ಜಿ ಸಲ್ಲಿಸಲು ವಿದ್ಯಾರ್ಹತೆ, ಪಿಯುಸಿ ವಿಜ್ಞಾನ ವಿಭಾಗದಲ್ಲಿ ಶೇ.50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು/ ಡಿಪ್ಲೋಮ ವಿಭಾಗದ ಮೆಕ್ಯಾನಿಕಲ್, ಎಲೆಕ್ಟ್ರಿಕಲ್, ಎಲೆಕ್ಟ್ರಾನಿಕ್ಸ್, ಆಟೋಮೊಬೈಲ್, ಕಂಪ್ಯೂಟರ್ ಸೈನ್ಸ್,ಇನ್ಟ್ಸ್ರುಮೆಂಟ್ ಟೆಕ್ನಾಲಜಿ, ಇನ್‍ಫಾರ್ಮೇಷನ್ ಟೆಕ್ನಾಲಜಿಯಲ್ಲಿ ಶೇ.50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು. ಅಥವಾ 2 ವರ್ಷದ ವೃತ್ತಿಪರ ಕೋರ್ಸ್ ಗಳಲ್ಲಿ ಭೌತಶಾಸ್ತ್ರ ಮತ್ತು ಗಣಿತ ವಿಷಯಗಳನ್ನು ವ್ಯಾಸಂಗ ಮಾಡಿ ಶೇ.50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು ಅಥವಾ ಯಾವುದೇ ಪಿಯುಸಿ ವಿಭಾಗದಲ್ಲಿ ಶೇ.50 ಅಂಕಗಳೊಂದಿಗೆ ತೇರ್ಗಡೆಯಾಗಿರಬೇಕು.

BIGG NEWS : ಮುಂದಿನ ಚುನಾವಣೆಯಲ್ಲಿ `ಜೆಡಿಎಸ್’ ಅಧಿಕಾರಕ್ಕೆ, ನಾನೇ ಮುಂದಿನ ಸಿಎಂ : ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ

17.5 ರಿಂದ 23 ವರ್ಷಗಳು ಅಂದರೆ ಅಭ್ಯರ್ಥಿಯು 29 ಡಿಸೆಂಬರ್ 1999 ರಿಂದ 29 ಜೂನ್ 2005 ನಡುವೆ ಜನಿಸಿರಬೇಕು. ಅರ್ಜಿ ಶುಲ್ಕ 250 ರೂ.ಗಳು. ಆಸಕ್ತ ಅಭ್ಯರ್ಥಿಗಳು ಸಂಪೂರ್ಣ ವಿವರಗಳಿಗೆ ವೆಬ್‍ಸೈಟ್ https://indianairforce.nic.in ನ ಮುಖಾ0ತರ ಮಾಹಿತಿ ಪಡೆಯಬಹುದು. ಆನ್‍ಲೈನ್ ಮೂಲಕ ಅರ್ಜಿಯನ್ನು https://agnipathvayu.cdac.in  ಜಾಲತಾಣಕ್ಕೆ ಭೇಟಿ ನೀಡುವುದು. ಅರ್ಜಿ ಸಲ್ಲಿಸಲು ಜುಲೈ, 05 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ಕಚೇರಿ ವೇಳೆಯಲ್ಲಿ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.

Share.
Exit mobile version