ಬೆಂಗಳೂರು : ರಾಜ್ಯ ಸರ್ಕಾರವು ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ 1137 ಸಿವಿಲ್ ಕಾನ್ ಸ್ಟೇಬಲ್ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
1137 ಸಿವಿಲ್ ಕಾನ್ ಸ್ಟೆಬಲ್ ಗಲ ನೇಮಕಾತಿಗೆ ಅಕ್ಟೋಬರ್ 20 ರಿಂದ ನವೆಂಬರ್ 21 ರ ಸಂಜೆ 6 ಗಂಟೆಯವರೆಗೆ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಆನ್ ಲೈನ್ ನಲ್ಲಿ ಅಧಿಕೃತ ಬ್ಯಾಂಕ್ ಶಾಲೆಗಳಲ್ಲಿ ಶುಲ್ಕ ಪಾವತಿ ಮಾಡಲು ನವೆಂಬರ್ 23 ಕೊನೆಯ ದಿನಾಂಕವಾಗಿದೆ.
ಹುದ್ದೆ : ಪೊಲೀಸ್ ಕಾನ್ಸ್ಟೇಬಲ್ (ಸಿವಿಲ್) (ಪುರುಷ ಮತ್ತು ಮಹಿಳಾ)
ಕರ್ತವ್ಯ ಸ್ಥಳ : ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕರ್ತವ್ಯ ನಿರ್ವಹಿಸಬೇಕು.
ಖಾಲಿಯಿರುವ ಹುದ್ದೆಗಳ ಸಂಖ್ಯೆ : ಒಟ್ಟು 1137 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಶೈಕ್ಷಣಿಕ ಅರ್ಹತೆ : ಅಭ್ಯರ್ಥಿಗಳು ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ ಪಿಯುಸಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವ ಕೊನೆಯ ದಿನಾಂಕ 21/11/2022ಕ್ಕೆ ಹೊಂದಿರಬೇಕು.
ವಯೋಮಾನ : ದಿನಾಂಕ 21 ನವೆಂಬರ್, 2022ಕ್ಕೆ ಅಭ್ಯರ್ಥಿಗೆ ಕನಿಷ್ಠ 19 ವರ್ಷ ವಯಸ್ಸಾಗಿರಬೇಕು ಹಾಗೂ ಪ.ಜಾತಿ/ಪ.ಪಂ/ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಗರಿಷ್ಠ 27 ವರ್ಷ, ಇತರೆ ಅಭ್ಯರ್ಥಿಗಳಿಗೆ ಗರಿಷ್ಠ 25 ವರ್ಷ, ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷ ನಿಗದಿಪಡಿಸಲಾಗಿದೆ.