ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ರಾಜ್ಯ ಸರ್ಕಾರವು ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಿದೆ.
ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಮಾಹಿತಿ ನೀಡಿದ್ದು, ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ ಎಂದಿದ್ದಾರೆ.
ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ ಬಸ್‌ಗಳನ್ನು ಖರೀದಿಸಲಾಗಿದೆ. ಈ ಮೂಲಕ ಉದ್ಯೋಗ ಸೃಷ್ಟಿಯು ಹೆಚ್ಚಾಗಿದೆ. ಈಗಾಗಲೇ ಸಾರಿಗೆ ಸಂಸ್ಥೆಗಳಲ್ಲಿನ 9,000 ಹುದ್ದೆಗಳ ನೇಮಕಾತಿಗೆ ಅನುಮತಿ ನೀಡುವುದರ ಜೊತೆಗೆ 2,000 ಚಾಲಕ ಕಂ ನಿರ್ವಾಹಕರು ಹಾಗೂ 300 ತಾಂತ್ರಿಕ ಸಿಬ್ಬಂದಿಗಳ ನೇಮಕಾತಿಗೆ ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ.
ಶಕ್ತಿ ಯೋಜನೆ ಜಾರಿಯ ನಂತರದಿಂದ ಸರ್ಕಾರಿ ಬಸ್‌ಗಳು ಪ್ರಯಾಣಿಕರಿಂದ ತುಂಬಿಹೋಗಿವೆ. ಮಹಿಳೆಯರು ಉದ್ಯೋಗ, ಶಿಕ್ಷಣ ಹಾಗೂ ಪ್ರವಾಸ ಮುಂತಾದ ಕಾರಣಗಳಿಗಾಗಿ ಉಚಿತ ಪ್ರಯಾಣದ ಸೌಲಭ್ಯ ಪಡೆದು ಸಂಚಾರ ನಡೆಸುತ್ತಿದ್ದು, ನಿಜಾರ್ಥದಲ್ಲಿ ಶಕ್ತಿ ನಾಡಿನ ಸಾರಿಗೆ ವ್ಯವಸ್ಥೆಗೆ ಶಕ್ತಿ ತುಂಬಿದೆ.
ಪ್ರಯಾಣಿಕರ ಸಂಖ್ಯೆಯೂ ಹೆಚ್ಚಾಗಿರುವ ಹಿನ್ನೆಲೆ ಹೆಚ್ಚುವರಿ… pic.twitter.com/l3j83rqDRu
— DIPR Karnataka (@KarnatakaVarthe) February 26, 2025
ಶಕ್ತಿ ಯೋಜನೆ ನಾಡಿನ ಮಹಿಳೆಯರಿಗೆ ಮಾತ್ರವಲ್ಲ ಸಾರಿಗೆ ಸಂಸ್ಥೆಗಳಿಗೂ ವರದಾನವಾಗಿದೆ. ರಾಜ್ಯ ರಸ್ತೆ ಸಾರಿಗೆ ಬಸ್‌ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ದುಪ್ಪಟ್ಟಾಗಿದ್ದು, ಈ ಹಿನ್ನೆಲೆ ಹೊಸದಾಗಿ ಬಸ್‌ಗಳನ್ನು ಖರೀದಿಸುವ ಜೊತೆಗೆ ಟ್ರಿಪ್‌ಗಳ ಪ್ರಮಾಣವು ಹೆಚ್ಚಳ ಮಾಡಲಾಗಿದೆ.
ಶಕ್ತಿ ಯೋಜನೆ ಜಾರಿಗೆ ಮುನ್ನ ಪ್ರತಿದಿನ ಕಾರ್ಯಾಚರಣೆಗೊಳಿಸುತ್ತಿದ್ದ 1,54,955 ಟ್ರಿಪ್‌ಗಳ ಪ್ರಮಾಣವು 1,76,787 ಕ್ಕೆ ಜಾಸ್ತಿಯಾಗಿದೆ. ಪ್ರತಿದಿನ 21,832 ಹೆಚ್ಚುವರಿ ಟ್ರಿಪ್‌ಗಳ ಕಾರ್ಯಾಚರಣೆಯಾಗುತ್ತಿದೆ.
ಈ ಮೂಲಕ ನಾಡಿನ ಮಹಿಳೆಯರಿಗೂ ಅನುಕೂಲವಾಗಿರುವ, ಸಾರಿಗೆ ಸಂಸ್ಥೆಗಳಿಗೂ ಲಾಭ ತಂದುಕೊಡುತ್ತಿರುವ ಶಕ್ತಿ ಯೋಜನೆ ರಾಜ್ಯದಲ್ಲಿ ಸಂಪರ್ಕ ಕ್ರಾಂತಿ ಸೃಷ್ಟಿಸಿದೆ.
ಉದ್ಯೋಗ, ಶಿಕ್ಷಣ ಮತ್ತು ವೈದ್ಯಕೀಯ ಅವಶ್ಯಕತೆಗಳು ಸೇರಿದಂತೆ ಜೀವನ ನಿರ್ವಹಣೆಯ ಉದ್ದೇಶಗಳಿಗಾಗಿ ಸಂಚರಿಸುವ ನಾಡಿನ ಕೋಟ್ಯಂತರ ಮಹಿಳೆಯರು, ವಿದ್ಯಾರ್ಥಿನಿಯರಿಗೆ ಸರ್ಕಾರಿ ಸಾರಿಗೆ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸಿ, ಅವರನ್ನು ಆರ್ಥಿಕ ಸ್ವಾವಲಂಬಿಯನ್ನಾಗಿಸುವ ಉದ್ದೇಶದೊಂದಿಗೆ ನಾವು ಶಕ್ತಿ ಯೋಜನೆಯನ್ನು ಜಾರಿಗೆ ತಂದಿದ್ದೇವೆ.
ಯೋಜನೆ ಜಾರಿಯಾದ ನಂತರದಿಂದ ಈವರೆಗೆ 400 ಕೋಟಿ ಬಾರಿ ಮಹಿಳೆಯರು ಉಚಿತವಾಗಿ ಸಾರಿಗೆ ಬಸ್‌ಗಳಲ್ಲಿ ಪ್ರಯಾಣ ಮಾಡಿದ್ದು, ಈವರೆಗಿನ ಒಟ್ಟು ಟಿಕೆಟ್ ಮೌಲ್ಯ ರೂ.9 ಸಾವಿರ ಕೋಟಿ ದಾಟಿದೆ. ನಮ್ಮ ಯೋಜನೆಯ ಉದ್ದೇಶ ಯಶಸ್ವಿಯಾಗಿ ಈಡೇರುತ್ತಿರುವ ಬಗ್ಗೆ ಸಂತಸವಾಗುತ್ತಿದೆ.







