ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ಕರ್ನಾಟಕ ಲೋಕಸೇವಾ ಆಯೋಗ (KPSC) ಭರ್ಜರಿ ಸಿಹಿಸುದ್ದಿ ನೀಡಿದದು, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ವಿವಿಧ ಇಲಾಖೆಗಳ ಗ್ರೂಪ್ ಸಿ ಹುದ್ದೆಗಳು ಸೇರಿದಂತೆ ಒಟ್ಟು 734 ಹುದ್ದೆಗಳ ನೇಮಕಾತಿಗೆ ಚಾಲನೆ ದೊರೆತಿದೆ.
ಕಲ್ಯಾಣ ಕರ್ನಾಟಕದ 97 ಹುದ್ದೆಗಳು ಸೇರಿದಂತೆ ಒಟ್ಟು 247 ಪಿಡಿಒ ಹುದ್ದೆಗಳನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಅಂಗೀಕೃತ ವಿಶ್ವವಿದ್ಯಾಲಯದ ಯಾವುದೇ ಪದವೀಧರರು ಅರ್ಜಿ ಸಲ್ಲಿಸಲು ಅರ್ಹತೆ ಹೊಂದಿದ್ದಾರೆ. ಏಪ್ರಿಲ್ 15 ರಿಂಧ ಮೇ. 15 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ.
ಇನ್ನು ಜಲಸಂಪನನ್ಮೂಲ ಇಲಾಖೆಯಲ್ಲಿ ಖಾಲಿ ಇರುವ 400 ಕ್ಕೂ ಹೆಚ್ಚು ಗ್ರೂಪ್ ಸಿ ಹುದ್ದೆಗಳ ನೇಮಕಾತಿಗೆ ಪ್ರತ್ಯೇಕ ಅಧಿಸೂಚನ ಹೊರಡಿಸಲಾಗಿದ್ದು, ಏಪ್ರಿಲ್ 29 ರಿಂದ ಮೇ. 28 ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ಕೆಪಿಎಸ್ ಸಿ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.