ಕೆಎನ್ಎನ್ಡಿಜಿಟಲ್ ಡೆಸ್ಕ್ : 10ನೇ ತರಗತಿ ಓದಿದ ಉದ್ಯೋಗಾಕಾಂಕ್ಷಿಗಳಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಭಾರತೀಯ ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಪೋಸ್ಟ್ ಮ್ಯಾನ್, ಮೇಲ್ ಗಾರ್ಡ್ ಮತ್ತು ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಇಂಡಿಯಾ ಪೋಸ್ಟ್ ತನ್ನ ಅಧಿಕೃತ ವೆಬ್ ಪೋರ್ಟಲ್ indiapost.gov.in ನಲ್ಲಿ ಈ ಘೋಷಣೆ ಮಾಡಿದ್ದು, ಒಟ್ಟು 98083 ಪೋಸ್ಟ್ ಮ್ಯಾನ್ 59099 ಮತ್ತು ಮೇಲ್ ಗಾರ್ಡ್ 1445 ಹುದ್ದೆಗಳು ಖಾಲಿ ಇವೆ. ಇನ್ನು ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ 23 ವಲಯಗಳಲ್ಲಿ ಒಟ್ಟು 37539 ಹುದ್ದೆಗಳು ಖಾಲಿ ಇವೆ.
ಅರ್ಹತೆ : ಅಧಿಕೃತ ಇಂಡಿಯಾ ಪೋಸ್ಟ್ ಆಫೀಸ್ ಅಧಿಸೂಚನೆ 2023ರ ಪ್ರಕಾರ, 10ನೇ ತರಗತಿ, 12ನೇ ತರಗತಿ ಉತ್ತೀರ್ಣರಾದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಇನ್ನು ಹೆಚ್ಚಿನ ಅಂಕ ಪಡೆದ ಅಭ್ಯರ್ಥಿಗಳನ್ನ ಹುದ್ದೆಗೆ ಆಯ್ಕೆ ಮಾಡಲಾಗುತ್ತೆ. ಅದ್ರಂತೆ, ಅರ್ಹತಾ ಮಾನದಂಡಗಳಿಗೆ ಸಂಬಂಧಿಸಿದ ಇತರ ವಿವರಗಳಿಗಾಗಿ ಅಧಿಕೃತ ಅಧಿಸೂಚನೆಯನ್ನ ಪರಿಶೀಲಿಸಿ.
ಅರ್ಜಿ ಸಲ್ಲಿಸುವುದು ಹೇಗೆ?
ಭಾರತೀಯ ಅಂಚೆ ನೇಮಕಾತಿ 2023ರ ನೋಂದಣಿ ಪ್ರಕ್ರಿಯೆ ಪ್ರಾರಂಭದ ದಿನಾಂಕ ಮತ್ತು ಕೊನೆಯ ದಿನಾಂಕದ ಬಗ್ಗೆ ಭಾರತೀಯ ಅಂಚೆ ಇಲಾಖೆ ಶೀಘ್ರದಲ್ಲೇ ಮಾಹಿತಿಯನ್ನ ನೀಡಲಿದೆ. ಅಧಿಕೃತ ವೆಬ್ಸೈಟ್ ಮೂಲಕ ಮಾತ್ರ ನೀವು ಈ ನೇಮಕಾತಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು.
ವಯಸ್ಸಿನ ಮಿತಿ.!
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಗರಿಷ್ಠ ವಯೋಮಿತಿಯನ್ನು 32 ವರ್ಷಗಳಿಗೆ ನಿಗದಿಪಡಿಸಲಾಗಿದೆ.
ನೋಂದಣಿ ಪ್ರಕ್ರಿಯೆ.!
1. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಗಳು ಮೊದಲು ಅಧಿಕೃತ ವೆಬ್ಸೈಟ್ indiapost.gov.in ಭೇಟಿ ನೀಡಬೇಕು.
2. ಈಗ ಮುಖಪುಟದಲ್ಲಿ ‘ಇಂಡಿಯಾ ಪೋಸ್ಟ್ ನೇಮಕಾತಿ 2023’ ಲಿಂಕ್ ಕಾಣಿಸಿಕೊಳ್ಳುತ್ತದೆ. ಅದರ ಮೇಲೆ ಕ್ಲಿಕ್ ಮಾಡಿ.
3. ನಂತರ ನಿಮ್ಮ ಮುಂದೆ ಹೊಸ ಪುಟ ತೆರೆದುಕೊಳ್ಳುತ್ತದೆ. ಇಲ್ಲಿ ‘ರಿಜಿಸ್ಟರ್ ನೌ’ ಮೇಲೆ ಕ್ಲಿಕ್ ಮಾಡಿ.
4. ಈಗ ನಿಮ್ಮ ಮುಂದೆ ಹೊಸ ಟ್ಯಾಬ್ ತೆರೆದುಕೊಳ್ಳುತ್ತದೆ. ಇಲ್ಲಿ ನೀವು ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಬೇಕು.
5. ನೋಂದಣಿಯ ನಂತರ ಅಭ್ಯರ್ಥಿಗಳು ಅಗತ್ಯ ದಾಖಲೆಗಳನ್ನು ಅಪ್ಲೋಡ್ ಮಾಡಬೇಕಾಗುತ್ತದೆ.
6. ವಿವರಗಳನ್ನು ಭರ್ತಿ ಮಾಡಿದ ನಂತರ ಮತ್ತು ದಾಖಲೆಗಳನ್ನು ಅಪ್ಲೋಡ್ ಮಾಡಿದ ನಂತರ, ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.
7. ಶುಲ್ಕವನ್ನು ಪಾವತಿಸಿದ ನಂತರ ನೋಂದಣಿ ಫಾರ್ಮ್ ಸಲ್ಲಿಸಬೇಕು. ಅದರ ಪ್ರಿಂಟ್ ಔಟ್ ತೆಗೆದುಕೊಳ್ಳಿ.
ನಿರುದ್ಯೋಗಿಗಳೇ ಎಚ್ಚರ ; ಸಾಮಾಜಿಕ ಜಾಲತಾಣಗಳಲ್ಲಿ ‘ಜಾಬ್ ಜಾಹೀರಾತು’ ನಂಬಿ 5 ಲಕ್ಷ ಕಳೆದುಕೊಂಡ ಮಹಿಳೆ