ನವದೆಹಲಿ : ಸ್ಟಾಫ್ ಸೆಲೆಕ್ಷನ್ ಕಮಿಷನ್ 12,523 MTS (ತಾಂತ್ರಿಕೇತರ) ಮತ್ತು ಹವಾಲ್ದಾರ್ ಹುದ್ದೆಗಳ ನೇಮಕಾತಿಗಾಗಿ ನೇಮಕಾತಿ ಅಧಿಸೂಚನೆಯನ್ನ ಬಿಡುಗಡೆ ಮಾಡಿದೆ. ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ಸಂಸ್ಥೆಯಿಂದ 10ನೇ ತರಗತಿ ಅಥವಾ ತತ್ಸಮಾನ ಕೋರ್ಸ್ನಲ್ಲಿ ಉತ್ತೀರ್ಣರಾದ ಯಾರಾದರೂ ಅರ್ಜಿ ಸಲ್ಲಿಸಬಹುದು. ಅಲ್ಲದೆ ಅಭ್ಯರ್ಥಿಗಳ ವಯಸ್ಸು ಜನವರಿ 1, 2023ಕ್ಕೆ 18 ರಿಂದ 27 ವರ್ಷಗಳ ನಡುವೆ ಇರಬೇಕು. SC/ST/OBC/PWBD ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇದೆ.
ಅರ್ಹ ಅಭ್ಯರ್ಥಿಗಳು 17ನೇ ಫೆಬ್ರವರಿ 2023ರ ಮೊದಲು ಆನ್ಲೈನ್ ಮೋಡ್ ಮೂಲಕ ಅರ್ಜಿ ಸಲ್ಲಿಸಬಹುದು. ಸಾಮಾನ್ಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವ ಸಮಯದಲ್ಲಿ ರೂ.100 ಅರ್ಜಿ ಶುಲ್ಕವನ್ನು ಪಾವತಿಸಬೇಕು. SC/ST/X ಸೈನಿಕರು/ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಅನ್ವಯಿಸುತ್ತದೆ. ಅಭ್ಯರ್ಥಿಗಳನ್ನ ಲಿಖಿತ ಪರೀಕ್ಷೆ / ದೈಹಿಕ ದಕ್ಷತೆ ಪರೀಕ್ಷೆ / ದೈಹಿಕ ಪ್ರಮಾಣಿತ ಪರೀಕ್ಷೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ. ಕಂಪ್ಯೂಟರ್ ಆಧಾರಿತ ಲಿಖಿತ ಪರೀಕ್ಷೆಯನ್ನ ಏಪ್ರಿಲ್ 2023ರಲ್ಲಿ ನಡೆಸಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ಅಧಿಸೂಚನೆಯಲ್ಲಿ ತಿಳಿಸಿರುವಂತೆ ವೇತನವನ್ನ ನೀಡಲಾಗುವುದು. ಇತರ ಮಾಹಿತಿಯನ್ನ ಅಧಿಕೃತ ಅಧಿಸೂಚನೆಯಲ್ಲಿ ಪರಿಶೀಲಿಸಬಹುದು.
ಲಿಖಿತ ಪರೀಕ್ಷೆಯ ವಿಧಾನ.!
ಒಟ್ಟು 90 ಪ್ರಶ್ನೆಗಳಿಗೆ 270 ಅಂಕಗಳಿಗೆ ಲಿಖಿತ ಪರೀಕ್ಷೆಯನ್ನ ನಡೆಸಲಾಗುತ್ತದೆ. ಒಂದೂವರೆ ಗಂಟೆಗಳ ಕಾಲ ಈ ಪರೀಕ್ಷೆ ನಡೆಸಲಾಗುವುದು. ಪ್ರಶ್ನೆ ಪತ್ರಿಕೆಯು ಎರಡು ವಿಭಾಗಗಳನ್ನ ಹೊಂದಿದ್ದು, ಪ್ರತಿಯೊಂದು ವಿಭಾಗವು ಎರಡು ವಿಭಾಗಗಳನ್ನ ಹೊಂದಿದೆ.
ಈ ಹುದ್ದೆಗಳ ಕುರಿತ ಹೆಚ್ಚಿನ ಮಾಹಿತಿಗಾಗಿ ಎಸ್ಎಸ್ಸಿಯ ಅಧಿಕೃತ ವೆಬ್ ಸೈಟ್ https://ssc.nic.in/ ಗೆ ಭೇಟಿ ನೀಡಿ.