ಬೆಂಗಳೂರು : ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ರಾಜ್ಯದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ 400 .ಫಾರ್ಮಸಿ ಅಧಿಕಾರಿ ಹುದ್ದೆಗಳನ್ನು ಮತ್ತು 150 ಕಿರಿಯ ಪ್ರಯೋಗಶಾಲಾ ತಾಂತ್ರಿಕ ಅಧಿಕಾರಿ ಹುದ್ದೆಗಳನ್ನು ಒಂದು ವರ್ಷದ ಅವಧಿಗೆ ಹೊರಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಸರ್ಕಾರವು ಅನುಮೋದನೆ ನೀಡಿದೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ನಿಟ್ಟಿನಲ್ಲಿ 400 ಫಾರ್ಮಸಿ ಅಧಿಕಾರಿಗಳು ಹಾಗೂ 150 ಕಿರಿಯ ಪ್ರಯೋಗ ಶಾಲಾ ತಾಂತ್ರಿಕ ಅಧಿಕಾರಗಳನ್ನು ಹೊರ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ನಿರ್ಧರಿಸಲಾಗಿದೆ.@DHFWKA pic.twitter.com/p10BfYfG7v
— Dr Sudhakar K (@mla_sudhakar) December 20, 2022
ರಾಜ್ಯ ಸರ್ಕಾರವು ಈ ಸಂಬಂಧ ಮಾರ್ಗಸೂಚಿಗಳನ್ನು ಆನುಸರಿಸಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳು ಕೂಡಲೇ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಅಲ್ಪಾವಧಿ ಟೆಂಡರ್ ಅನ್ನು ನಿಯಮಾನುಸಾರ ಕರೆಯುವ ಮೂಲಕ ಹೊರಗುತ್ತಿಗೆ ಆಧಾರದ ಮೂಲಕ ನೇಮಕಾತಿ ಮಾಡಿಕೊಳ್ಳಲು ಸೂಚಿಸಿದೆ. ಸದರಿ ಹುದ್ದೆಗಳನ್ನು ಹೊರಗುತ್ತಿಗೆ ಮೂಲಕ ಭರ್ತಿ ಮಾಡುವ ಬಗ್ಗೆ ಅನುದಾನವನ್ನು ಖಾಲಿ ಇರುವ ರಾಜ್ಯ ಮತ್ತು ಜಿಲ್ಲಾ ವಲಯದ ಸಂಸ್ಥೆಗಳಲ್ಲಿ ಯಾವ ಲೆಕ್ಕಶೀರ್ಷಿಕೆಗಳಡಿ ಮಂಜೂರಾಗಿರುತ್ತದೆಯೋ ಆದೇ ಲೆಕ್ಕ ಶೀರ್ಷಿಕೆಯ ಉಪ ಲೆಕ್ಕಶೀರ್ಷಿಕೆ 034ರಡಿ ಭರಿಸುವಂತೆ ಹಾಗೂ ಕ್ರಮವಹಿಸಿದ ವರದಿಯನ್ನು ಆಯುಕ್ತಾಲಯಕ್ಕೆ ಸಲ್ಲಿಸಲು ಸೂಚಿಸಿದೆ.