ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಪಶುವೈದ್ಯಕೀಯ ಸಹಾಯಕ ನೇಮಕಾತಿಗೆ ಅಧಿಸೂಚನೆ ಪ್ರಕಟ ಮಾಡಲಾಗಿದ್ದು, ಒಟ್ಟು 250 ಪಶುವೈದ್ಯಕೀಯ ಸಹಾಯಕರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ತಮಿಳುನಾಡಿನಲ್ಲಿ RSS ಸದಸ್ಯನ ಮನೆಗೆ ಪೆಟ್ರೋಲ್ ಬಾಂಬ್ ಎಸೆದು ಎಸ್ಕೇಪ್ ಆದ ಅಪರಿಚಿತರು… ವಿಡಿಯೋ
ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಭರ್ತಿ ಮಾಡ, ಭಾವಚಿತ್ರ ಮತ್ತು ಸಹಿಯನ್ನು ಅಪ್ಲೋಡ್ ಮಾಡಿದ ನಂತರ ಶುಲ್ಕವನ್ನು ಯಾವುದೇ ಇ ಅಂಚೆ ಕಚೇರಿಯ ಮೂಲಕ ಸಂದಾಯ ಮಾಡಬಹುದಾಗಿದೆ. ಶುಲ್ಕವನ್ನು ಪಾವತಿಸದೇ ಹಾಗೂ ಭಾವಚಿತ್ರ/ಸಹಿಯನ್ನು ಅಪ್ಲೋಡ್ ಮಾಡದೇ ಇರುವ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.
BIGG NEWS : ಕರ್ತವ್ಯನಿರತ ಚಾಲಕ ವಿಶ್ರಾಂತಿಯಲ್ಲಿ ಮೃತಪಟ್ಟರೂ ವಿಮೆ : ಹೈಕೋರ್ಟ್ ಮಹತ್ವದ ಆದೇಶ
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಪ್ರಾರಂಭಿಕ ದಿನಾಂಕ 05-10-2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 04-11-2022
ಶುಲ್ಕವನ್ನು ಪಾವತಿಸಲು ಕೊನೆಯ ದಿನಾಂಕ 06-10-22
ವಿದ್ಯಾರ್ಹತೆ
ಈ ಹುದ್ದೆಗೆ ಪಶು ಸಂಗೋಪನೆ ಡಿಪ್ಲೊಮ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ನಿರ್ದೇಶಕರು ವೃತ್ತಿ ಶಿಕ್ಷಣ, ಕರ್ನಾಟಕ ಸರ್ಕಾರವು ನಡೆಸಲಾದ ಡೈರಿ, ಪೌಲ್ಟ್ರಿಗೆ ಸಂಬಂಧಿಸಿದ ಎರಡು ವರ್ಷಗಳ ಉದ್ಯೋಗ ಆಧಾರಿತ ಕೋರ್ಸ್ ನಲ್ಲಿ ಉತ್ತೀರ್ಣರಾಗಿರುವವರು ಅರ್ಹರಾಗಿರುತ್ತಾರೆ. ಇನ್ನು ಅರ್ಜಿ ಸಲ್ಲಿಸಲು ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳಿಗೆ 35 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 38 ವರ್ಷ, ಎಸ್ಸಿ-ಎಸ್ಟಿ-ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಇಡಲಾಗಿದೆ.