ಕಲಬುರಗಿ : ಕಲಬುರಗಿ ಸರ್ಕಾರಿ ಐಟಿಐ ಕಾಲೇಜು ಹಿಂದುಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಇದೇ ಆಗಸ್ಟ್ 25 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದ್ದು, ಉದ್ಯೋಗ ಮೇಳದಲ್ಲಿ ಕೆಳಕಂಡ ಕಂಪನಿಗಳು ಭಾಗವಹಿಸಲಿವೆ ಎಂದು ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಕಲಬುರಗಿ ಫ್ಲೀಪ್ಕಾರ್ಟ್ದಲ್ಲಿ ಡೆಲಿವರಿ ಎಕ್ಸಿಕ್ಯೂಟಿವ್ 30 ಹುದ್ದೆಗಳಿಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 20 ರಿಂದ 45 ವರ್ಷದೊಳಗಿರಬೇಕು. ಪುರುಷ ಅಭ್ಯರ್ಥಿಗಳು ಡ್ರೈವಿಂಗ ಲೈಸನ್ಸ್ ಮತ್ತು ಬೈಕ್ ಇರಬೇಕು.
ಕಲಬುರಗಿಯ ಭಾರತ ಫೈನಾನ್ಸಿಯಲ್ ಇನ್ಕ್ಲೂಜನ್ ಪ್ರೈ.ಲಿ.ದಲ್ಲಿ ಫೀಲ್ಡ್ ಅಸಿಸ್ಟಂಟ್ 30 ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಮತ್ತು ಪಿ.ಯು.ಸಿ. ಪಾಸಾಗಿರಬೇಕು. ಅದೇ ರೀತಿ ಲೋನ್ ಆಫೀಸರ್ 20 ಹುದ್ದೆಗಳಿಗೆ ಪಿ.ಯು.ಸಿ. ಹಾಗೂ ಪದವೀಧರ ವಿದ್ಯಾರ್ಹತೆ ಹೊಂದಿರಬೇಕು. ಭಾರತ ಮನಿ ಆಫೀಸರ್ 10 ಹುದ್ದೆಗಳಿಗೆ ಎಸ್.ಎಸ್.ಎಲ್.ಸಿ ಹಾಗೂ ಪಿ.ಯು.ಸಿ. ಪಾಸಾಗಿರಬೇಕು. ವಯೋಮಿತಿ 21 ರಿಂದ 28 ವರ್ಷದೊಳಗಿನ ಪುರುಷ ಅಭ್ಯರ್ಥಿಗಳು ಮಾತ್ರ ಉದ್ಯೋಗ ಮೇಳದಲ್ಲಿ ಭಾಗವಹಿಸಹುದಾಗಿದೆ.
ಕಲಬುರಗಿ ಎಸ್.ಬಿ.ಐ. ಲೈಫ್ ಇನ್ಸೂರೆನ್ಸ್ದಲ್ಲಿ ಸೇಲ್ಸ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 25 ರಿಂದ 40 ವರ್ಷದೊಳಗಿರಬೇಕು. ಬಿಸಿನೆಸ್ ಪಾರ್ಟನರ್/ ಲೈಫ್ ಮಿತ್ರ ಹುದ್ದೆಗೆ ಎಸ್.ಎಸ್.ಎಲ್.ಸಿ., ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು. 30 ರಿಂದ 60 ವರ್ಷದೊಳಗಿರಬೇಕು.
ಟೆಲಿಕಾಲರ್ ಹುದ್ದೆಗೆ ಪಿ.ಯು.ಸಿ. ವಿದ್ಯಾರ್ಹತೆ ಹೊಂದಿರಬೇಕು. ಮಹಿಳಾ ಅಭ್ಯರ್ಥಿಗಳು ವಯೋಮಿತಿ 18 ರಿಂದ 35 ವರ್ಷದೊಳಗಿರಬೇಕು. ಯುನಿಟ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 25 ರಿಂದ 35 ವರ್ಷದೊಳಗಿರಬೇಕು.
ಕಲಬುರಗಿಯ ಹಿಂದೂಸ್ಥಾನ ಮೈಕ್ರೋ ಫೈನಾನ್ಸ್ದಲ್ಲಿ ಕಸ್ಟಮರ್ ಸರ್ವೀಸ್ ಪ್ರೋವೈಡರ್ ಹುದ್ದೆಗೆ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ., ಪಿ.ಯು.ಸಿ ವಿದ್ಯಾರ್ಹತೆ ಹೊಂದಿರಬೇಕು. ವಯೋಮಿತಿ 18 ರಿಂದ 28 ವರ್ಷ ದೊಳಗಿರಬೇಕು. ಕ್ರೆಡಿಟ್ ಆಫೀಸರ್ ಹುದ್ದೆಗೆ ಯಾವುದೇ ಪದವಿ ಹೊಂದಿರಬೇಕು. ವಯೋಮಿತಿ 18 ರಿಂದ 32 ವರ್ಷದೊಳಗಿರಬೇಕು. ಬ್ರ್ಯಾಂಚ್ ಮ್ಯಾನೇಜರ್ ಹುದ್ದೆಗೆ ಯಾವುದೇ ಪದವಿ ಪಾಸಾಗಿರಬೇಕು. ವಯೋಮಿತಿ 18 ರಿಂದ 36 ವರ್ಷದೊಳಗಿರಬೇಕು.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ (ರೆಸ್ಯೂಮ್) ಬಯೋಡಾಟಾ ವಿದ್ಯಾರ್ಹತೆಯ ಪ್ರಮಾಣಪತ್ರ ಹಾಗೂ ಆಧಾರ್ ಕಾರ್ಡ್ದೊಂದಿಗೆ ಸದರಿ ಸಂದರ್ಶನದಲ್ಲ್ಲಿ ಭಾಗವಹಿಸಬೇಕು. ಸಂದರ್ಶನದಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ.
ಮತ್ತಿತರ ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ 08472-274846 ಗೆ ಸಂಪರ್ಕಿಸಲು ಕೋರಲಾಗಿದೆ.