ಮಡಿಕೇರಿ : ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಸೆಪ್ಟೆಂಬರ್, 26 ರಂದು ಬೆಳಗ್ಗೆ 10.30 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಉದ್ಯೋಗ ಮೇಳ ನಡೆಯಲಿದೆ.
93 ನೇ ʻಮನ್ ಕಿ ಬಾತ್ʼ: ಇಂದು ಬೆಳಗ್ಗೆ 11 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ | Mann Ki Baat
ಉದ್ಯೋಗ ಮೇಳದಲ್ಲಿ ಎಚ್ಡಿಎಫ್ಸಿ ಬ್ಯಾಂಕ್, ಮಡಿಕೇರಿ, ಎಲ್ ಅಂಡ್ ಟಿ ಟೆಕ್ನಾಲಜಿ ಸರ್ವೀಸಸ್, ಮೈಸೂರು, ಇಂಡಸ್ ಐಎನ್ಡಿ ಬ್ಯಾಂಕ್, ಬೆಂಗಳೂರು, ಕೂರ್ಗ್ ಕ್ಲಿಪ್ಸ್ ರೆಸಾರ್ಟ್, ಪಾಲಿಬೆಟ್ಟ ತಮ್ಮ ಸಂಸ್ಥೆಗಳಲ್ಲಿ ಖಾಲಿಯಿರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲಿದ್ದಾರೆ.
ʻಎತ್ತುಗಳಿಗೆ ಟ್ರೆಡ್ಮಿಲ್ ನಿರ್ಮಿಸಿ ನೀರು ಪಂಪ್ʼ ಮಾಡುತ್ತಿರುವ ವಿಡಿಯೋ ವೈರಲ್… ನೆಟ್ಟಿಗರಿಂದ ಆಕ್ರೋಶ ವ್ಯಕ್ತ
ಎಸ್ಎಸ್ಎಲ್ಸಿ, ಪಿಯುಸಿ, ಐಟಿಐ, ಡಿಪ್ಲೋಮ, ಯಾವುದೇ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಈ ಉದ್ಯೋಗಮೇಳದಲ್ಲಿ ಭಾಗವಹಿಸಬಹುದು. ಅಭ್ಯರ್ಥಿಗಳು ವಿದ್ಯಾರ್ಹತೆಯ ಮೂಲ ದಾಖಲಾತಿಗಳು ಹಾಗೂ ಸ್ವ-ವಿವರಗಳ ಪ್ರತಿಗಳೊಂದಿಗೆ ಉದ್ಯೋಗಮೇಳದಲ್ಲಿ ಹಾಜರಾಗುವಂತೆ ತಿಳಿಸಿದೆ. ಹೆಚ್ಚಿನ ಮಾಹಿತಿಗೆ ದೂ.ಸಂ.08272-225851 ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಉಮಾ ಅವರು ತಿಳಿಸಿದ್ದಾರೆ.
Rain In Karnataka : ಕರಾವಳಿ ಸೇರಿ ರಾಜ್ಯದ ಈ ಜಿಲ್ಲೆಗಳಲ್ಲಿ ಎರಡು ದಿನ ಮಳೆ ಸಾಧ್ಯತೆ