ಬೆಂಗಳೂರು: ರಾಜ್ಯ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ವೃಂದದ ಹುದ್ದೆಗಳನ್ನು ಭರ್ತಿ ಮಾಡಲು ಸರ್ಕಾರ ಮುಂದಾಗಿದ್ದು, ಈ ಕುರಿತು ಪೊಲೀಸ್ ಮಹಾನಿರ್ದೇಶಕರು ಮತ್ತು ಐಜಿಪಿ ಅವರ ಕಚೇರಿಯಿಂದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಸುಮಾರು 8,176 ವಿವಿಧ ಹುದ್ದೆಗಳ ನೇರ ನೇಮಕಾತಿಗೆ ಸಂಬಂಧಿಸಿದಂತೆ ವರ್ಗೀಕರಣದ ವಿವರಗಳನ್ನು ಪ್ರಕಟಿಸಲಾಗಿದೆ.
ಪರಿಶಿಷ್ಟ ಜಾತಿಯ ಒಟ್ಟು ಶೇ.15 ರಷ್ಟು ಮೀಸಲಾತಿಯಲ್ಲಿ ಪ್ರವರ್ಗ-ಎ ಗೆ ಶೇ.5.25, ಪ್ರವರ್ಗ-ಬಿ ಗೆ ಶೇ.5.25 ಮತ್ತು ಪ್ರವರ್ಗ-ಸಿ ಗೆ ಶೇ.4.5 ರಷ್ಟು ಒಳಮೀಸಲಾತಿಯನ್ನು ನಿಗದಿಪಡಿಸಲಾಗಿದೆ. 545 ಮತ್ತು 402 ಪಿಎಸ್‌ಐ ಹುದ್ದೆಗಳ ನೇಮಕಾತಿಯಲ್ಲಿ ನಡೆದ ಅಕ್ರಮಗಳ ಹಿನ್ನೆಲೆಯಲ್ಲಿ ಕಳೆದ 3.5 ವರ್ಷಗಳಿಂದ ಯಾವುದೇ ನೇಮಕಾತಿ ನಡೆದಿರಲಿಲ್ಲ. ಇದರಿಂದಾಗಿ ಸಾವಿರಾರು ಅಭ್ಯರ್ಥಿಗಳು ವಯೋಮಿತಿ ಮೀರುವ ಭೀತಿಯಲ್ಲಿದ್ದರು.
ಹುದ್ದೆಗಳ ವಿವರ ಈ ಕೆಳಗಿನಂತಿದೆ:
ನೇಮಕಾತಿ ಪ್ರಕ್ರಿಯೆಯಲ್ಲಿ ಕಲ್ಯಾಣ ಕರ್ನಾಟಕ ಮತ್ತು ಉಳಿಕೆ ಕರ್ನಾಟಕ ಭಾಗಗಳಿಗೆ ಪ್ರತ್ಯೇಕವಾಗಿ ಹುದ್ದೆಗಳನ್ನು ಮೀಸಲಿಡಲಾಗಿದೆ.









