ಬೆಂಗಳೂರು : ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದ ಮೇಲೆ ಹಿಂದೂ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದಾರೆ.
ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಿಡಿಸಿದ ಆರೋಪದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಾಟನ್ ಪೇಟ್ ಪೊಲೀಸರು ಪುನೀತ್ ಕೆರೆಹಳ್ಳಿಯನ್ನು ಬಂಧಿಸಿದ್ದಾರೆ.
ರಾಜಸ್ಥಾನದಿಂದ ಬೆಂಗಳೂರಿಗೆ ಕುರಿ ಮಾಂಸದ ಬದಲು ನಾಯಿ ಮಾಂಸ ಮಾರಾಟ ಮಾಡಲಾಗುತ್ತಿದ್ದು, ರೈಲಿನ ಮೂಲಕ ರಾಜಸ್ಥಾನದಿಂದ ಬೆಂಗಳೂರಿಗೆ ತರಲಾಗಿದ್ದ ಮಾಂಸವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ವೇಳೆ ಹಿಂದೂ ಸಂಘಟನೆ ಮುಖಂಡ ಪುನೀತ್ ಕೆರೆಹಳ್ಳಿ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಡಿ ಬಂಧಿಸಿಲಾಗಿದೆ