ಧಾರವಾಡ : ಧಾರವಾಡ ಜಿಲ್ಲಾ ಪಂಚಾಯತ ಪ್ರಧಾನ ಕಛೇರಿಯಲ್ಲಿ ಹಾಗೂ ಧಾರವಾಡ ಜಿಲ್ಲೆಯಲ್ಲಿ ಹೊಸದಾಗಿ ರಚನೆಯಾಗಿರುವ ಅಳ್ನಾವರ ಮತ್ತು ಅಣ್ಣಿಗೇರಿ ತಾಲೂಕ ಪಂಚಾಯತಿಗಳಿಗೆ ಮಹಾತ್ಮಾ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಿರುವ 15 ವಿವಿಧ ಹುದ್ದೆಗಳಿಗೆ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇರೆಗೆ ಆಯ್ಕೆ ಮಾಡಲು ಆನ್‍ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ.
Good News : ವಸತಿ ರಹಿತರಿಗೆ ಗುಡ್ ನ್ಯೂಸ್ : ವಾಜಪೇಯಿ ನಗರ ವಸತಿ ಯೋಜನೆಗೆ ಅರ್ಜಿ ಆಹ್ವಾನ
ಅರ್ಹ ಅಭ್ಯರ್ಥಿಗಳು ಫೆಬ್ರವರಿ 10 ರೊಳಗೆ ಅಧಿಕೃತ ವೆಬ್‍ಸೈಟ್‍ಗಳಾದ http://zpdharwad.karnataka.gov.in ಮತ್ತು http://dharwad.nic.in ಮುಖಾಂತರ ನೀಡಲಾಗಿರುವ ಲಿಂಕ್‍ನಲ್ಲಿ ಆನ್‍ಲೈನ್ ಅರ್ಜಿಗಳನ್ನು ಸಲ್ಲಿಸಬೇಕು. ಹೆಚ್ಚಿನ ವಿವರಗಳಿಗೆ 0836-2447542 ದೂರವಾಣಿ ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸುಶೀಲಾ ಬಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Good News : ರಾಜ್ಯದ ಗ್ರಾಮೀಣ ಜನತೆಗೆ ಸಿಹಿಸುದ್ದಿ : ರಾಜ್ಯ ಸರ್ಕಾರದಿಂದ ಇಂದು `ಗ್ರಾಮ ಒನ್’ ಸೇವೆಗೆ ಚಾಲನೆ