ಉಡುಪಿ : ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 29 ರಂದು ಬೆಳಗ್ಗೆ 10.30 ಕ್ಕೆ ಮಿನಿ ಉದ್ಯೋಗ ಮೇಳ ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐ.ಟಿ.ಐ, ಬಿ.ಕಾಂ, ಬಿ.ಇ ಇಂಜಿನಿಯರಿಂಗ್ ಮತ್ತು ಡಿಪ್ಲೋಮಾ ಹಾಗೂ ಇತರೆ ಪದವಿ ವಿದ್ಯಾರ್ಹತೆಯೊಂದಿಗೆ ಉತ್ತೀರ್ಣರಾದ ಅಭ್ಯರ್ಥಿಗಳು ತಮ್ಮ ಅಂಕಪಟ್ಟಿ, ಸ್ವ-ವಿವರವುಳ್ಳ ರೆಸ್ಯೂಮ್/ಸಿವಿ ಹಾಗೂ ಆಧಾರ್ ಕಾರ್ಡ್ ಪ್ರತಿಯೊಂದಿಗೆ ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ, ಜಿಲ್ಲಾಧಿಕಾರಿ ಸಂಕೀರ್ಣ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 8105618291, 9945856670 ಹಾಗೂ 9901472710 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೈಂದೂರು: ಐ.ಟಿ.ಐ ಪ್ರವೇಶಾತಿ – ಅರ್ಜಿ ಆಹ್ವಾನ
ಉಡುಪಿ : ಬೈಂದೂರು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಪ್ರಸಕ್ತ ಸಾಲಿಗೆ ಎನ್.ಸಿ.ವಿ.ಟಿ ಸಂಯೋಜನೆ ಹೊಂದಿರುವ ಎಲೆಕ್ಟಿಷಿಯನ್ ಮತ್ತು ಫಿಟ್ಟರ್ ವೃತ್ತಿಗಳಿಗೆ ಹಾಗೂ ಉದ್ಯೋಗ ಯೋಜನೆಯ ಟಾಟಾ ಟೆಕ್ನಾಲಜೀಸ್ ಸಹಯೋಗದೊಂದಿಗೆ ಇಂಡಸ್ಟಿಯಲ್ ರೋಬೋಟಿಕ್ಸ್ & ಡಿಜಿಟಲ್ ಮ್ಯಾನುಫ್ಯಾಕ್ಚರಿಂಗ್ ಟೆಕ್ನಿಷಿಯನ್ ಮತ್ತು ಮೆಷಿನ್ ಎಲೆಕ್ಟಿಕ್ ವೆಹಿಕಲ್ ಕೋರ್ಸ್ ಗಳ ಪ್ರವೇಶಾತಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜೂನ್ 7 ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಇಲಾಖಾ ವೆಬ್ಸೈಟ್ ಸಂಪರ್ಕಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ರೈಲಿನಿಂದ ಕಳಚಿದ ಇಂಜಿನ್ : ತಪ್ಪಿದ ಭಾರಿ ದುರಂತ
BREAKING NEWS : ರಾಯಚೂರಿನಲ್ಲಿ ಕಲುಷಿತ ನೀರು ಸೇವಿಸಿ ಬಾಲಕ ಸಾವು, 30 ಕ್ಕೂ ಹೆಚ್ಚು ಜನರು ಅಸ್ವಸ್ಥ