ಬೆಂಗಳೂರು : ಕೌಶಲ್ಯಾಭಿವೃದ್ಧಿ. ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ವತಿಯಿಂದ ಫೆಬ್ರವರಿ 9 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 04 ಗಂಟೆಯ ವರೆಗೆ ರೋಟರಿ ಹಾಲ್, ಸರ್ಕಾರಿ ಹೈಸ್ಕೂಲ್ ಕಾಂಪೌಂಡ್,13ನೇ ಕ್ರಾಸ್, ಮಲ್ಲೇಶ್ವರಂ ಇಲ್ಲಿ “ಫ್ರೀ ಇಂಟರ್ವ್ಯೂ ಓರಿಯಂಟೇಶನ್” ಮತ್ತು ಫೆಬ್ರವರಿ 11 ರಂದು ಬೆಳಗ್ಗೆ 10.00 ಗಂಟೆಯಿಂದ ಸಂಜೆ 04 ಗಂಟೆಯ ವರೆಗೆ ಸರ್ಕಾರಿ ಪ್ರಥಮ ದರ್ಜೆ ಹಾಗೂ ಪಿಯು ಕಾಲೇಜ್ ಆವರಣ, 18ನೇ ಕ್ರಾಸ್, ಮಲ್ಲೇಶ್ವರಂ, ಬೆಂಗಳೂರು ಇಲ್ಲಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಎಸ್.ಎಸ್.ಎಲ್.ಸಿ., ಪಿ.ಯು.ಸಿ., ಐಟಿಐ., ಡಿಪ್ಲೋಮಾ, ಬಿ.ಇ ಮತ್ತು ಯಾವುದೇ ಪದವಿ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿ, ಈ ಸದಾವಕಾಶವನ್ನು ಬಳಸಿಕೊಳ್ಳಬಹುದು.
ಅಭ್ಯರ್ಥಿಗಳು ನೊಂದಣಿಗಾಗಿ https://skillconnect.kaushalkar.com/candidatereg ಲಿಂಕ್ ನಲ್ಲಿ ನೋಂದಾಯಿಸಿಕೊಳ್ಳಬಹುದು.
ಆಸಕ್ತ ಅಭ್ಯರ್ಥಿಗಳು ಶೈಕ್ಷಣಿಕ ದಾಖಲೆಗಳ ಜೆರಾಕ್ಸ್ ಪ್ರತಿ, ಪಾಸ್ ಪೋರ್ಟ್, ಆಧಾರ್ ಕಾರ್ಡ್ ಹಾಗೂ ಸ್ವ ವಿವರಗಳೊಂದಿಗೆ (Resume) ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9964907444, 8105020115, 9108347465 ಗೆ ಸಂಪರ್ಕಿಸಬಹುದು ಎಂದು ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
GOOD NEWS : ಶೀಘ್ರವೇ ಹೊಸದಾಗಿ 15 ಸಾವಿರ ಶಿಕ್ಷಕರ ನೇಮಕ : ಸಿಎಂ ಬೊಮ್ಮಾಯಿ