ಕೊಪ್ಪ: ಕೊಪ್ಪಳ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಿಂದ ನವೆಂಬರ್ 29ರಂದು ನಾಳೆ ಉದ್ಯೋಗ ಮೇಳ ಆಯೋಜಿಸಲಾಗಿದ್ದು. ಆಸಕ್ತರು ಭಾಗವಹಿಸಬಹುದಾಗಿದೆ.
ನವೆಂಬರ್ 29ರ ಬೆಳಗ್ಗೆ 10.30 ರಿಂದ 2.30ರ ವರೆಗೆ ಜಿಲ್ಲಾಡಳಿತ ಭವನದಲ್ಲಿರುವ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದಲ್ಲಿ ನೇರ ಸಂದರ್ಶನ ನಡೆಯಲಿದೆ.
18 ರಿಂದ 24 ವರ್ಷ ವಯೋಮಿತಿಯ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದ್ದುಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಪ್ರಮಾಣ ಪತ್ರಗಳು ಮತ್ತು ಆಧಾರ್ ಕಾರ್ಡ್ ಪ್ರತಿ, ರೆಸ್ಯೂಮ್ಗಳೊಂದಿಗೆ ನೇರ ಸಂದರ್ಶನಕ್ಕೆ ಹಾಜರಾಗಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ಜಿಲ್ಲಾ ಆಡಳತ ಭವನ, ಮೊದಲನೇ ಮಹಡಿ, ಕೊಪ್ಪಳ ಇವರನ್ನು ಸಂಪರ್ಕಿಸಬಹುದಾಗಿದೆ. ಅಥವಾ ದೂರವಾಣಿ ಸಂಖ್ಯೆಗಳು 08539-220859, 9880750997.ಕರೆ ಮಾಡಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
BIGG NEWS: ಬೆಳಗಾವಿಗೆ ಬನ್ನಿ ಎಂದು ಮಹಾರಾಷ್ಟ್ರ ಗಡಿ ಸಮನ್ವಯ ಸಚಿವರಿಗೆ ಎಂಇಎಸ್ ಪತ್ರ