ವಿಜಯಪುರ : ವಿಜಯಪುರದಲ್ಲಿ ನವೆಂಬರ್ 25 ರಂದು ಅಥಣಿ ರಸ್ತೆಯಲ್ಲಿರುವ ನಗರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಮಿನಿ ಉದ್ಯೋಗ ಮೇಳವನ್ನು (Job Fair In Vijayapura) ಆಯೋಜಿಸಲಾಗಿದೆ.
ಎಸ್.ಎಸ್.ಎಲ್.ಸಿ., ಪಿಯುಸಿ, ಐಟಿಐ, ಡಿಪ್ಲೋಮಾ, ಇಂಜಿನೀಯರಿಂಗ್ ಪದವಿ ಹಾಗೂ ಯಾವುದೇ ಸ್ನಾತಕೋತ್ತರ ಪದವಿ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಭಾಗವಹಿಸಬಹುದಾಗಿದ್ದು, ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿವೆ. ಆಸಕ್ತರು ತಮ್ಮ ಸಂಪೂರ್ಣ ವಿವರಗಳೊಂದಿಗೆ ಬಯೋಡೇಟಾ ಜೊತೆ ನ.25 ರಂದು ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.
ಆಸಕ್ತರು ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ – 08352-250383, ಮೊ : 9945000793, 9620095270, 9110856771, 9900607080, 9901497747 ಅಥವಾ ವಿಜಯಪುರ ನಗರದಲ್ಲಿರುವ ಉದ್ಯೋಗಾಧಿಕಾರಿಗಳು, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರ, ವಿಜಯಪುರ ಇವರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ.
ಅಕ್ರಮ ಹಣ ವರ್ಗಾವಣೆ ಪ್ರಕರಣ : ದೆಹಲಿಯಲ್ಲಿ ‘ED’ ವಿಚಾರಣೆ ಬಳಿಕ ಡಿ.ಕೆ ಶಿವಕುಮಾರ್ ಹೇಳಿದ್ದೇನು |D.K Shivakumar