ಧಾರವಾಡ : ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮ, ಜಿಲ್ಲಾ ಕೌಶಲ್ಯ ಮಿಶನ್, ಕಾಲೇಜು ಶಿಕ್ಷಣ ಇಲಾಖೆ, ಉದ್ಯೋಗ ಮತ್ತು ತರಬೇತಿ ಇಲಾಖೆ, ಜನತಾ ಶಿಕ್ಷಣ ಸಮಿತಿ, ರ್ಯಾಪೀಡ್ ಸಂಸ್ಥೆ ಹಾಗೂ ಸಮರ್ಥನಂ ಅಂಗವಿಕಲರ ಸಂಸ್ಥೆಗಳ ಸಹಯೋಗದೊಂದಿಗೆ ಧಾರವಾಡ ನಗರದ ವಿದ್ಯಾಗಿರಿ ಜೆ.ಎಸ್.ಎಸ್. ಆವರಣದಲ್ಲಿ ಉದ್ಯೋಗ ಮೇಳವನ್ನು ಡಿಸೆಂಬರ್ 18 ರಂದು ಬೆಳಿಗ್ಗೆ 9 ಗಂಟೆಗೆ ಆಯೋಜಿಸಲಾಗಿದೆ.
ಉದ್ಯೋಗ ಮೇಳದಲ್ಲಿ ಎಸ್.ಎಸ್.ಎಲ್.ಸಿ ಅನುತ್ತೀರ್ಣ ಮತ್ತು ಅದಕ್ಕಿಂತಲೂ ಕಡಿಮೆ ಶಿಕ್ಷಣ ಪಡೆದವರು ಹಾಗೂ ಎಸ್.ಎಸ್.ಎಲ್.ಸಿ, ಪಿ.ಯು.ಸಿ, ಐಟಿಐ, ಡಿಪ್ಲೋಮಾ, ಬಿಇ, ಬಿಎ, ಬಿ.ಕಾಂ ಇನ್ನಿತರೆ ಪದವಿ ಮತ್ತು ಸ್ನಾತಕೋತರ ಪದವಿ ಪಾಸಾದ ಅಭ್ಯರ್ಥಿಗಳು ಭಾಗವಹಿಸಬಹುದು.
ಉದ್ಯೋಗ ಮೇಳದಲ್ಲಿ ಒಟ್ಟು 70 ಕಿಂತ ಅಧಿಕ ಉದ್ಯೋಗದಾತರು ಭಾಗವಹಿಸುತ್ತಾರೆ. ಅಭ್ಯರ್ಥಿಗಳು http://skillconnect.kaushalkar.com/candidatereg Google link ನಲ್ಲಿ ನೋಂದಾಯಿಸಿ ಮತ್ತು ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವ ಕಂಪನಿಗಳು (ಉದ್ಯೋಗದಾತರು) ಈ https://skillconnect.kaushalkar.com/employereg Google link ನಲ್ಲಿ ನೋಂದಾಯಿಸಿಕೊಂಡು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
BIGG NEWS : ‘ಮಾಂಡೌಸ್’ ಎಫೆಕ್ಟ್ : ಬೆಂಗಳೂರು ನಗರದ ಹಲವೆಡೆ ಧಾರಾಕಾರ ಮಳೆ