ಮಡಿಕೇರಿ: ಸಂಜೀವಿನಿ ಕೆಎಸ್‍ಆರ್‍ಎಲ್‍ಪಿಎಸ್ ನ ಡಿಡಿಯುಜಿಕೆವೈ ಯೋಜನೆಯಡಿ ಉದ್ಯೋಗ ಮೇಳ ನಡೆಯಲಿದೆ.
ಜಿಲ್ಲೆಯ ಕನಿಷ್ಠ 800 ಅಭ್ಯರ್ಥಿಗಳಿಗೆ ಉದ್ಯೋಗದಾತ ಸಂಸ್ಥೆಗಳ ಮೂಲಕ ಉದ್ಯೋಗವಕಾಶ ಕಲ್ಪಿಸುವ ಮೂಲಕ ಕೊಡಗು ಜಿಲ್ಲಾ ಪಂಚಾಯಿತಿ ವತಿಯಿಂದ ಮಾರ್ಚ್, 08 ರಂದು ಬೆಳಗ್ಗೆ 10 ಗಂಟೆಯಿಂದ ನಗರದ ಜಿಲ್ಲಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆ(ಐಟಿಐ) ಯಲ್ಲಿ ‘ಜಿಲ್ಲಾ ಮಟ್ಟದ ಉದ್ಯೋಗ ಮೇಳ’ ನಡೆಯಲಿದೆ.
ಈ ಉದ್ಯೋಗ ಮೇಳದಲ್ಲಿ ಹಲವಾರು ಪ್ರತಿಪ್ಠಿತ ಕಂಪನಿಗಳು ಭಾಗವಹಿಸುತ್ತಿದ್ದು, ಸ್ಥಳದಲ್ಲಿಯೇ ಉದ್ಯೋಗಾವಕಾಶ ಕಲ್ಪಿಸಿ ತರಬೇತಿಗೆ ಆಯ್ಕೆ ಮಾಡಿಕೊಳ್ಳಲಾಗುವುದು. ಆದ್ದರಿಂದ ಜಿಲ್ಲೆಯ 18 ರಿಂದ 35 ವರ್ಷದೊಳಗಿನ ನಿರುದ್ಯೋಗಿ ಯುವಕ/ ಯುವತಿಯರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಜಿ.ಪಂ.ಸಿಇಒ ಆನಂದ ಪ್ರಕಾಶ್ ಮೀನಾ ಅವರು ತಿಳಿಸಿದ್ದಾರೆ.
ಮಾ.06ರ ನಾಳೆ ವಿದ್ಯುತ್ ವ್ಯತ್ಯಯ
66/11 ಕೆ.ವಿ ಸೋಮವಾರಪೇಟೆ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ 11 ಕೆವಿ ಎಫ್3 ಶನಿವಾರಸಂತೆ ಮಾರ್ಗದಲ್ಲಿ, ಶನಿವಾರಸಂತೆ ಶಾಖಾ ವ್ಯಾಪ್ತಿಯ ಕೆಎಸ್‍ಆರ್‍ಟಿಸಿ ಬಸ್ ನಿಲ್ದಾಣದ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಮಾರ್ಚ್, 06 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಈ ಮಾರ್ಗಗಳ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜು ಸ್ಥಗಿತಗೊಳಿಸಲಾಗುವುದು.
ಆದ್ದರಿಂದ ಶನಿವಾರಸಂತೆ ಟೌನ್, ಗುಡುಗಳಲೆ, ಕಾಜೂರು, ಕೂಜುಗೇರಿ, ಮಾದ್ರೆ, ಅಪ್ಪಶೆಟ್ಟಳ್ಳಿ, ಶೆಟ್ಟಿಗನ ಹಳ್ಳಿ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಹಾಗೂ ಸ್ಥಳದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಚಾವಿಸನಿನಿದ ಕಾರ್ಯ ಮತ್ತು ಪಾಲನೆ ವಿಭಾಗದ ಕಾರ್ಯನಿರ್ವಾಹಕ ಎಂಜಿನಿಯರ್ ಅವರು ಕೋರಿದ್ದಾರೆ.
BREAKING: ಪರಿಷ್ಕೃತ ಜಾನುವಾರು ಆರೋಗ್ಯ ಕಾರ್ಯಕ್ರಮಕ್ಕೆ ಸಂಪುಟದ ಅನುಮೋದನೆ: ಪ್ರಧಾನಿ ಮೋದಿ
ಮಕ್ಕಳ ವಿವಾಹ ಪ್ರೋತ್ಸಾಹಧನ ಬಿಡುಗಡೆ ನಿರೀಕ್ಷೆಯಲ್ಲಿದ್ದ ಕಟ್ಟಡ ಕಾರ್ಮಿಕರಿಗೆ ಸಚಿವ ಸಂತೋಷ್ ಲಾಡ್ ಗುಡ್ ನ್ಯೂಸ್