ಚಿಕ್ಕಬಳ್ಳಾಪುರ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್.. ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವಿಪತ್ತು ನಿರ್ವಹಣಾ ಸಲಹೆಗಾರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.
ಸಲಹೆಗಾರ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ವಿಜ್ಞಾನ/ಸಮಾಜ ವಿಜ್ಞಾನ/ಗ್ರಾಮೀಣಾಭಿವೃದ್ಧಿ/ಪರಿಸರ ವಿಜ್ಞಾನ/ನಿರ್ವಹಣೆಯಲ್ಲಿ ಸ್ನಾತಕೋತ್ತರ ಪದವಿ ಪಡೆದಿರಬೇಕು. ಆಯ್ಕೆಯಾಗುವ ವ್ಯಕ್ತಿಗೆ ತಿಂಗಳಿಗೆ 48,400 ರೂ. ವೇತನ ನೀಡಲಾಗುತ್ತದೆ.
ಅರ್ಜಿ ಸಲ್ಲಿಸಲು ನವೆಂಬರ್ 28, 2022 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. http://117.247.113.244/DMCR/ ಮೂಲಕ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿಗಳ ಕಚೇರಿ ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ಹೊರಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08156-277001 ಗೆ ಕರೆ ಮಾಡಬಹುದಾಗಿದೆ.
ಪಿಂಚಣಿ ಮಾಡಿಸೋ ನೆಪದಲ್ಲಿ ವೃದ್ದೆಯರಿಂದ ಸರ ಅಪಹರಿಸುತ್ತಿದ್ದ ವಂಚನ ಬಂಧನ
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಅಕ್ರಮವೇ ನಡೆದಿಲ್ಲ ಅಂದ್ರೇ ತನಿಖೆ ಯಾಕೆ – ಸಿದ್ಧರಾಮಯ್ಯ ಪ್ರಶ್ನೆ