ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್..ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 437 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.
ಹೌದು, ಶೀಘ್ರದಲ್ಲೇ ಈ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರ ಬೀಳಲಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.
ಹುದ್ದೆಯ ಹೆಸರು: ಬೋಧನೆ ಮತ್ತು ಬೋಧಕೇತರ
ಹುದ್ದೆಗಳ ಸಂಖ್ಯೆ: 437
ಉದ್ಯೋಗ ಸ್ಥಳ: ಕರ್ನಾಟಕ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ ಪದವಿ, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಬಿಎಡ್, ಎಂಫಿಲ್, ಪಿಎಚ್ಡಿ ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್: kvafsu.edu.in ವೀಕ್ಷಿಸಬಹುದು.