ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್..ಕರ್ನಾಟಕ ಪಶು ವೈದ್ಯಕೀಯ, ಪಶು ಮತ್ತು ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ 437 ಹುದ್ದೆಗಳ ಭರ್ತಿಗೆ ಆರ್ಥಿಕ ಇಲಾಖೆ ಅನುಮೋದನೆ ನೀಡಿದೆ.

ಹೌದು, ಶೀಘ್ರದಲ್ಲೇ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರ ಬೀಳಲಿದ್ದು,  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಕರ್ನಾಟಕ ಪಶುವೈದ್ಯಕೀಯ ಪಶು ಮತ್ತು ಮೀನುಗಾರಿಕೆ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಹುದ್ದೆಗಳಿದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಯ ಹೆಸರು: ಬೋಧನೆ ಮತ್ತು ಬೋಧಕೇತರ
ಹುದ್ದೆಗಳ ಸಂಖ್ಯೆ: 437
ಉದ್ಯೋಗ ಸ್ಥಳ: ಕರ್ನಾಟಕ

ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ
ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಶೀಘ್ರದಲ್ಲೇ ಅಧಿಸೂಚನೆ ಹೊರಬೀಳಲಿದೆ.

 ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿಗಳು ಅಥವಾ ವಿಶ್ವವಿದ್ಯಾಲಯಗಳಿಂದ  ಪದವಿ, ಸ್ನಾತಕೋತ್ತರ ಪದವಿ, ಸ್ನಾತಕೋತ್ತರ ಪದವಿ, ಬಿಎಡ್​, ಎಂಫಿಲ್​, ಪಿಎಚ್ಡಿ  ಪೂರ್ಣಗೊಳಿಸಿರಬೇಕು. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್ಸೈಟ್: kvafsu.edu.in   ವೀಕ್ಷಿಸಬಹುದು.

Share.
Exit mobile version