ಬೆಂಗಳೂರು: ಬೆಂಗಳೂರು ಮೆಡಿಕಲ್ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಖಾಲಿ ಇರುವಂತ ನರ್ಸಿಂಗ್ ಆಫೀಸರ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನೇಮಕಗೊಂಡವರಿಗೆ ರೂ.25,088 ವೇತನ ದೊರೆಯಲಿದೆ.
ಈ ಸಂಬಂಧ ಬಿಎಂಸಿ ಅಧಿಸೂಚನೆ ಹೊರಡಿಸಿದ್ದು, ಖಾಲಿ ಇರುವಂತ 82 ನರ್ಸಿಂಗ್ ಆಫೀಸರ್ ಹುದ್ದೆಗೆ ಗುತ್ತಿಗೆ ಆಧಾರದ ಮೇಲೆ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ದಿನಾಂಕ 15-04-2025ರ ಒಳಗಾಗಿ ಅರ್ಜಿ ಸಲ್ಲಿಸುವಂತೆ ಕೋರಿದೆ.
ಒಟ್ಟು 82 ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಿಕೊಳ್ಳಲಾಗುತ್ತಿದೆ. ರೂ.25,088 ವೇತನ ನಿಗದಿ ಪಡಿಸಲಾಗಿದೆ. ಬಿಎಸ್ಸಿ ನರ್ಸಿಂಗ್ ವ್ಯಾಸಂಗ ಮಾಡಿದವರು ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ.
ಈ ಹುದ್ದೆಗೆ ಅರ್ಜಿಯೊಂದಿಗೆ ಎಸ್ ಎಸ್ ಎಲ್ ಸಿ, ಪಿಯುಸಿ, ಪದವಿ, ಡಿಪ್ಲೋಮಾ ಅಂಕಪಟ್ಟಿಗಳ ನಕಲು ಪ್ರತಿಯನ್ನು ಸಲ್ಲಿಸಬೇಕಿದೆ.
ಅರ್ಜಿ ಸಲ್ಲಿಸುವ ವಿಳಾಸ: ಮುಖ್ಯ ಆಡಳಿತಾಧಿಕಾರಿಗಳ ಕಚೇರಿ, ಬಿಎಂಸಿಆರ್ಐ, ಬೆಂಗಳೂರು-560002 ಇಲ್ಲಿಗೆ ದಿನಾಂಕ 15-04-2025ರ ಒಳಗಾಗಿ ಅರ್ಜಿಯನ್ನು ಕಳುಹಿಸಿಕೊಡಬಹುದಾಗಿದೆ.
MLC ರಾಜೇಂದ್ರ ಸುಫಾರಿ ಕೇಸ್: ಇದು ಆಡಿಯೋದಲ್ಲಿನ ಪುಷ್ಪ ಹಿಂದಿನ ಖತರ್ನಾಕ್ ಸ್ಟೋರಿ
BREAKING : ಮೈಸೂರಲ್ಲಿ 2 ಬೈಕ್ ಗಳ ಮಧ್ಯ ಮುಖಾಮುಖಿ ಡಿಕ್ಕಿ : ಸ್ಥಳದಲ್ಲೇ ಇಬ್ಬರ ಸಾವು, ಮೂವರಿಗೆ ಗಾಯ