ಮಡಿಕೇರಿ : ಸಿಎಸ್ಐಆರ್ ಕೇಂದ್ರೀಯ ಆಹಾರ ತಂತ್ರಜ್ಞಾನ ಸಂಶೋಧನಾಲಯ, ಮೈಸೂರು ಇಲ್ಲಿ ಆಡಳಿತಾತ್ಮಕ ಸ್ಥಾನ (Admistrative positions) ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಮೇ, 07 ಕೊನೆಯ ದಿನವಾಗಿದೆ. ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗೆ ವೆಬ್ಸೈಟ್ http://cftri.res.in or http://recruitment.cftri.res.in ನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ ಮಂಜುನಾಥ್ ಅವರು ತಿಳಿಸಿದ್ದಾರೆ.