ಶಿವಮೊಗ್ಗ: ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆಯು ಗ್ರಾಮೀಣ ಪುನರ್ವಸತಿ ಯೋಜನೆಯಡಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಖಾಲಿ ಇರುವಂತ ವಿ ಆರ್ ಡಬ್ಲ್ಯೂ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಈ ಕುರಿತಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ತೀರ್ಥಹಳ್ಳಿ ತಾಲ್ಲೂಕಿನ ನೊಣಬೂರು, ಸಾಲೂರು, ಮೇಗವಳ್ಳಿ, ಹೊದಲ ಅರಳಾಪುರ, ತೀರ್ಥಮುತ್ತೂರು, ಮೇಲಿನಕುರುವಳ್ಳಿ, ಮೇಳಿಗೆ, ಹೆದ್ದೂರು ಮತ್ತು ಕುಡುಮಲ್ಲಿಗೆ ಗ್ರಾಮ ಪಂಚಾಯ್ತಿಗಳಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ತೀರ್ಥಹಳ್ಳಿ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ದಿವಾಕರ್ ಬಿ.ಆರ್. ಮೊ.ಸಂ: 9480767638 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ತಿಳಿಸಿದ್ದಾರೆ.
ಸೊರಬ: ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ
ಸೊರಬ ತಾಲ್ಲೂಕಿನ ಗುಡುವಿ ಗ್ರಾಮ ಪಂಚಾಯ್ತಿಯಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಸೊರಬ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ಭರತ್ ಕುಮಾರ್ ಮೊ.ಸಂ: 9110493122 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ತಿಳಿಸಿದ್ದಾರೆ.
ಸಾಗರ: ವಿ.ಆರ್.ಡಬ್ಲ್ಯು ಹುದ್ದೆಗೆ ಅರ್ಜಿ ಆಹ್ವಾನ
ಸಾಗರ ತಾಲ್ಲೂಕಿನ ತುಮರಿ ಗ್ರಾಮ ಪಂಚಾಯ್ತಿಯಲ್ಲಿ ವಿ.ಆರ್.ಡಬ್ಲ್ಯು ಹುದ್ದೆಯು ಖಾಲಿಯಿದ್ದು, ಗ್ರಾ.ಪಂ/ಹತ್ತಿರದ ಗ್ರಾಮ ಪಂಚಾಯ್ತಿಗಳಲ್ಲಿ ವಾಸವಿರುವ 18 ರಿಂದ 45 ವಯೋಮಿತಿಯೊಳಗಿನ ಅರ್ಹ ವಿಕಲಚೇತನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ನಿಗದಿತ ಅರ್ಜಿ ನಮೂನೆಯನ್ನು ಸಾಗರ ತಾಲ್ಲೂಕು ಪಂಚಾಯ್ತಿ ಕಚೇರಿಯಲ್ಲಿ ಎಂ.ಆರ್.ಡಬ್ಲ್ಯು ಆಗಿ ಕಾರ್ಯ ನಿರ್ವಹಿಸುತ್ತಿರುವ ಶ್ಯಾಮ್ ಸುಂದರ್ ಕೆ.ಎನ್. ಮೊ.ಸಂ: 9535247757 ಇವರಿಂದ ಪಡೆದು ಭರ್ತಿ ಮಾಡಿದ ಅರ್ಜಿಯೊಂದಿಗೆ 10ನೇ ತರಗತಿ ಉತ್ತೀರ್ಣರಾಗಿರುವ ಬಗ್ಗೆ ಅಂಕಪಟ್ಟಿ, ಜಾತಿ ಮತ್ತು ಆದಾಯ ಪ್ರಮಾಣಪತ್ರ, ವಾಸಸ್ಥಳ ದೃಢೀಕರಣ ಪತ್ರ, ಆಧಾರ್ ಕಾರ್ಡ್, ಯುಡಿಐಡಿ ಕಾರ್ಡ್ ದಾಖಲಾತಿಗಳನ್ನು ಅ.10 ರೊಳಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.
MLA ಟಿಕೆಟ್ ಕೊಡಿಸೋದಾಗಿ ವಂಚನೆ ಕೇಸ್: ನಿರೀಕ್ಷಣಾ ಜಾಮೀನಿಗಾಗಿ ‘ಅಭಿನಯ ಹಾಲಶ್ರೀ’ ಕೋರ್ಟ್ ಗೆ ಅರ್ಜಿ